ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಪನಹಳ್ಳಿ | ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಪ್ರತಿಭಟನೆ

Published 17 ಏಪ್ರಿಲ್ 2024, 15:46 IST
Last Updated 17 ಏಪ್ರಿಲ್ 2024, 15:46 IST
ಅಕ್ಷರ ಗಾತ್ರ

ಹರಪನಹಳ್ಳಿ: ಗ್ಯಾರಂಟಿ ಯೋಜನೆ ಫಲಾನುಭವಿ ಮಹಿಳೆಯರ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಕಾಂಗ್ರೆಸ್‍ ಪಕ್ಷದ ಮಹಿಳಾ ಘಟಕದ ಪದಾಧಿಕಾರಿಗಳು ಬುಧವಾರ ಪ್ರತಿಭಟನಾ ಧರಣಿ ನಡೆಸಿದರು.

ಪಟ್ಟಣದ ಇಜಾರಿ ಶಿರಸಪ್ಪ ವೃತ್ತದ ಪಕ್ಕದಲ್ಲಿ ಸತ್ಯಾಗ್ರಹ ನಡೆಸಿದ ಮಹಿಳೆಯರು ಕಸಪೊರಕೆ, ಭಿತ್ತಿ ಪತ್ರ ಪ್ರದರ್ಶಿಸಿ ಕುಮಾರಸ್ವಾಮಿ ವಿರುದ್ಧ ದಿಕ್ಕಾರ ಕೂಗಿದರು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಖಾತೆಗಳಿಗೆ ಪ್ರತಿ ತಿಂಗಳು ₹2 ಸಾವಿರ ಹಣ ಪಾವತಿಸುತ್ತಿದೆ. ಈ ಹಣ ಲಕ್ಷಾಂತರ ಕುಟುಂಬಗಳನ್ನು ಕಷ್ಟದಿಂದ ಪಾರು ಮಾಡಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಸೋಲಿನ ಭೀತಿಯಲ್ಲಿ ಹತಾಶೆಯಿಂದ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಮಹಿಳಾ ಘಟಕದ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಭಾಗ್ಯಮ್ಮ, ಕವಿತಾ ಸುರೇಶ್, ಉಮಾಶಂಕರ, ನೇತ್ರಾವತಿ, ರೇಣುಕಾಬಾಯಿ, ಕಂಚಿಕೇರಿ ರೇಣುಕ, ಸುಮಾ, ವನಜಾಕ್ಷಮ್ಮ, ಹುಲಿಗೆಮ್ಮ, ಪುಷ್ಪಾ, ಶಕುಂತಲಾ, ಗೌರಮ್ಮ ಇತರರಿದ್ದರು.

ಹರಪನಹಳ್ಳಿ ಇಜಾರಿ ಶಿರಸಪ್ಪ ವೃತ್ತದ ಪಕ್ಕದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ದಿಕ್ಕಾರದ ಬಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದರು. ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಮಹಿಳಾ ಮುಖಂಡರಿದ್ದರು.
ಹರಪನಹಳ್ಳಿ ಇಜಾರಿ ಶಿರಸಪ್ಪ ವೃತ್ತದ ಪಕ್ಕದಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ದಿಕ್ಕಾರದ ಬಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟಿಸಿದರು. ಶಾಸಕಿ ಲತಾ ಮಲ್ಲಿಕಾರ್ಜುನ್ ಹಾಗೂ ಮಹಿಳಾ ಮುಖಂಡರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT