ಕುರುಗೋಡು: ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಬಾವಿ ಆಂಜನೇಯಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆ ಹೋಮ, ಹವನ, ವಿಶೇಷ ಪೂಜೆ ಧಾರ್ಮಿಕ ವಿಧಿವಿಧಾನ ಜರುಗಿದವು. ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಹೂ, ಹಣ್ಣು, ಕಾಯಿ ಸಮರ್ಪಿಸಿ ಭಕ್ತಿ ಮೆರೆದರು.

ಇಟಗಿ ಹಿರೇಮಠ ಸಂಸ್ಥಾನದ ಗುರುಶಾಂತವೀರ ಶ್ರೀ, ಕಲ್ಲುಕಂಭ ರುದ್ರಮುನಿ ತಾತ ಮತ್ತು ಸದ್ಗುರು ಕರಿಬಸವ ಶರಣರು ಪೂಜೆಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

ಸಂಜೆ ಅಲಂಕೃತ ರಥವನ್ನು ದೇವಸ್ಥಾನದ ಆವರಣದಿಂದ ಪಾದಗಟ್ಟೆವರೆಗೆ ಎಳೆದು ನಂತ ಸ್ವಸ್ಥಳಕ್ಕೆ ಭಕ್ತರು ಎಳೆದುತಂದರು. ರಥ ಎಳೆಯುವ ಸಂದರ್ಭದಲ್ಲಿ ಭಕ್ತರು ಆಂಜನೇಯಸ್ವಾಮಿಗೆ ಜಯಕಾರ ಕೂಗಿದರು.

ಬಾದನಹಟ್ಟಿ ಸೇರಿದಂತೆ ಸಿದ್ದಮ್ಮನಹಳ್ಳಿ, ಯರಿಂಗಳಿಗಿ, ಕುರುಗೋಡು, ಯಲ್ಲಾಪುರ, ವದ್ದಟ್ಟಿ ಗ್ರಾಮಗಳ ಜನರು ರಥೋತ್ಸವ ವೀಕ್ಷಣೆಗೆ ಆಗಮಿಸಿದ್ದರು. ರಥಕ್ಕೆ ಹೂ–ಹಣ್ಣು ಎಸೆದು ಭಕ್ತಿ ಮೆರೆದರು. ರಥೋತ್ಸವದ ಅಂಗವಾಗಿ ಕಳೆದ ಒಂಬತ್ತು ದಿನಗಳ ಕಾಲ ಜರುಗಿದ ಸಪ್ತ ಭಜನೆ ಶುಕ್ರವಾರ ಕೊನೆಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-25-1756535132

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.