ಕುರುಗೋಡು: ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡದೆ ಎಲ್ಲ ಸದಸ್ಯರಿಗೆ ಸಮಾನವಾಗಿ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ಸದಸ್ಯರು ವಾರ್ಡ್ಗಳ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಸಮಸ್ಯೆಯಾಗುತ್ತದೆ ಎಂದು ಬಿಜೆಪಿ ಸದಸ್ಯರು ಅಸಮಾದಾನ ವ್ಯಕ್ತಪಡಿಸಿದರು.

ಇಲ್ಲಿನ ಪುರಸಭೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸಭೆಯಲ್ಲಿ ಒತ್ತಾಯಿಸಿದರು. ಸದಸ್ಯ ನರಸಪ್ಪ ಯಾದವ್ ಮಾತನಾಡಿ, ‘ಕೆಲವು ವಾರ್ಡ್ಗಳಿಗೆ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ಎಲ್ಲ ವಾರ್ಡ್ಗಳಿಗೆ ಸಮರ್ಪಕವಾಗಿ ನೀರು ಸರಬರಾಜುಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

2ನೇ ವಾರ್ಡ್ಗೆ ಕಲುಷಿತ ನೀರು ಸರಬರಾಜುಗೊಳ್ಳುತ್ತಿದ್ದು, ವೃದ್ಧರು, ಚಿಕ್ಕಮಕ್ಕಳು ಸೇವಿಸಿ ಆರೋಗ್ಯ ಸಮಸ್ಯೆ ಉಂಟಾದರೆ ಯಾರು ಜವಾಬ್ದಾರಿ ಎಂದು ಸದಸ್ಯೆ ಶಾಂತಮ್ಮ ಪ್ರಶ್ನಿಸಿದರು.

ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಪ್ರತಿಕ್ರಿಯಿಸಿ, ‘ಬೇಸಿಗೆಯಲ್ಲಿ ಕಾಲುವೆ ನೀರು ದೊರೆಯದ ಕಾರಣ ಪೂರ್ಣ ಪ್ರಮಾಣದಲ್ಲಿ ಕೆರೆ ತುಂಬಿಸಲು ಸಾಧ್ಯವಾಗಲಿಲ್ಲ. ಕೆರೆ ತುಂಬಿದರೂ ಕೇವಲ 75 ದಿನ ಮಾತ್ರ ನೀರು ಸರಬರಾಜು ಮಾಡಲು ಸಾಧ್ಯ. ಮತ್ತೊಂದು ಕೆರೆಯ ಅಗತ್ಯವಿದ್ದು, ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತಿಳಿಸಿದರು.

ಮಳೆ ಬಂದರೆ ಚರಂಡಿ ತುಂಬಿ ಕಲುಷಿತ ನೀರು ಮನೆಗಳಿಗೆ ನುಗ್ಗಿತ್ತಿವೆ. ವಿಷ ಜಂತುಗಳ ಹಾವಳಿ ಹೆಚ್ಚಾಗಿದೆ. ಚರಂಡಿ ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು ಎಂದು ಸದಸ್ಯೆ ಕೆ.ಸಿ. ಲಲಿತಮ್ಮ ಅಧಿಕಾರಿಗಳ ಗಮನಕ್ಕೆ ತಂದರು.

ಗೆಣಿಕೆಹಾಳು ರಸ್ತೆಯಲ್ಲಿರುವ ಕಳಸ ವೈನ್ಸ್ ಮುಂದೆ ಜನಸಂದಣಿ ಹೆಚ್ಚಾಗುತ್ತಿದೆ. ಪುರಸಭೆ ಪಕ್ಕದಲ್ಲಿರುವ ತಾಲ್ಲೂಕು ಪಂಚಾಯಿತಿಗೆ ಸೇರಿದ ಜಾಗದಲ್ಲಿ ಜನರು ಅನಧಿಕೃತವಾಗಿ ಗೂಡಂಗಡಿಗಳನ್ನು ಇಟ್ಟುಕೊಂಡಿದ್ದು, ತೆರುವುಗೊಳಿಸಬೇಕು. ಅಮೃತ ಯೋಜನೆಯ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ ಕಾಮಗಾರಿ ಚುರುಕುಗೊಳಿಸಬೇಕು ಎಂದು ಸದಸ್ಯರು ತಿಳಿಸಿದರು. ಪುರಸಭೆ ಅಧ್ಯಕ್ಷ ಜಿ.ಮಂಜುನಾಥ, ಉಪಾಧ್ಯಕ್ಷೆ ನಾಗವೇಣಿ, ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-25-923781291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.