ಕುರುಗೋಡು: ‘ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸರ್ಕಾರ ನೇಮಿಸಿಕೊಳ್ಳುವ ಅತಿಥಿ ಶಿಕ್ಷಕ ಆಯ್ಕೆ ಪ್ರಕ್ರಿಯೆಯಲ್ಲಿ ಮೆರಿಟ್ ಆಧಾರದಲ್ಲಿ ನಡೆಯುತ್ತಿದ್ದು, ಜತೆಗೆ ಅನುಭವವನ್ನು ಪರಿಗಣಿಸಬೇಕು’ ಎಂದು ಅತಿಥಿ ಶಿಕ್ಷಕದ ಸಂಘದ ತಾಲ್ಲೂಕು ಘಟಕದ ಸದಸ್ಯರು ಬಿಇಒ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.

ಅತಿಥಿ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲೇಶ್ ಹಾಗೂ ತಾಲ್ಲೂಕು ಅಧ್ಯಕ್ಷ ಎಸ್.ರಾಮಪ್ಪ ಮಾತನಾಡಿ, ‘ಅತಿಥಿ ಶಿಕ್ಷಕರ ಸೇವಾ ಜೇಷ್ಠತೆ ಪರಿಗಣಿಸಿ ನೇಮಕ ಮಾಡಿಕೊಳ್ಳಬೇಕು. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಕ್ಷಣ ಇಲಾಖೆ ಆಯುಕ್ತರ ಗಮನಕ್ಕೆ ತರಬೇಕು’ ಎಂದು ಒತ್ತಾಯಿಸಿದರು. ಬಿಇಒ ಕಚೇರಿ ಪತ್ರಾಂಕಿತ ವ್ಯವಸ್ಥಾಪಕ ವೈಎಸ್. ಭುಜಂಗ ಮಠ ಅವರು ಮನವಿ ಸ್ವೀಕರಿಸಿದರು. ಮಾರೆಣ್ಣ, ಹೊನ್ನೂರ ಸ್ವಾಮಿ, ಪಂಡುರಂಗ, ವಿರೂಪಾಕ್ಷಯ್ಯ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-25-850076107

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.