ಕುರುಗೋಡು: ಇಲ್ಲಿನ ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೇ 15 ರಂದು ಚುನಾವಣೆ ನಡೆಸಲು ನರಸಪ್ಪ ತಹಶೀಲ್ದಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ವರ್ಗಕ್ಕೆ ಮತ್ತು ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರುತ್ತದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವ ಸಭೆ ಮೇ 15 ರಂದು ಬೆಳಿಗ್ಗೆ 9 ಗಂಟೆಗೆ ಪುರಸಭೆ ಕಾರ್ಯಾಲಯದಲ್ಲಿ ನಡೆಯಲಿದೆ.

ಅದೇ ಸಂದರ್ಭದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಬೆಳಿಗ್ಗ 9 ಗಂಟೆಯಿಂದ 11 ಗಂಟೆವರೆಗೆ ಸ್ವೀಕರಿಸಲಾಗುವುದು. ಬೆಳಿಗ್ಗೆ 11.15 ರಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ಅಭ್ಯರ್ಥಿ ನಾಮಪತ್ರ ವಾಪಾಸು ಪಡೆಯಬಹುದಾಗಿದೆ.

ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರಿಗಿಂತ ಅಧಿಕ ಸದಸ್ಯರು ನಾಮಪತ್ರ ಸಲ್ಲಿಸಿದರೆ ಮಧ್ಯಾಹ್ನ 12 ಗಂಟೆಗೆ ಸದಸ್ಯರ ಸಭೆ ನಡೆಸಿ ಕೈ ಎತ್ತುವ ಮೂಲಕ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಿ ಆಯ್ಕೆಮಾಡಲಾಗುವುದು ಎಂದು ಚುನಾವಣಾಧಿಕಾರಿ ನರಸಪ್ಪ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-25-539838370

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.