ಕುರುಗೋಡು: ತಾಲ್ಲೂಕಿನ ಮೆಣಸಿ ನಕಾಯಿ ಬೆಳೆಗಾರರ ಹಿತದೃಷ್ಟಿಯಿಂದ ದೃಢೀಕರಿಸಿದ ಬೀಜ ಬಳಸಿ ಮೆಣ ಸಿನಕಾಯಿ ಸಸಿ ಬೆಳೆಯಬೇಕು’ ಎಂದು ತಹಶೀಲ್ದಾರ್ ನರಸಪ್ಪ ಸೂಚಿಸಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಮೆಣಸಿನ ಕಾಯಿ ಬೆಳೆಗಾರರ ಮತ್ತು ನರ್ಸರಿ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ‘ನರ್ಸರಿ ಮಾಲೀಕರು ನಡೆಸುವ ಚಟುವಟಿಕೆಗಳು ನಿಯಮ ಬದ್ಧವಾಗಿರಬೇಕು. ನರ್ಸರಿ ಜಾಗ ಗುತ್ತಿಗೆ ಪಡೆದಿದ್ದಲ್ಲಿ ನಿಯಮಾನುಸಾರ ಒಡಂಬಡಿಕೆ ಮಾಡಿಸಿಕೊಳ್ಳಬೇಕು. ನರ್ಸರಿ ನಾಮಫಲಕದಲ್ಲಿ ಜಿಎಸ್ಟಿ ಸಂಖ್ಯೆ ಅಳವಡಿಕೆ ಕಡ್ಡಾಯ’ ಎಂದು ಹೇಳಿದರು.

ಮಾರುಕಟ್ಟೆಯಲ್ಲಿ ಕೃತಕ ಮುಗ್ಗಟ್ಟು ಸೃಷ್ಟಿಸದೆ ಪ್ರತಿ ಸಸಿಗೆ 50 ಪೈಸೆಯಂತೆ ದರ ನಿಗದಿಗೊಳಿಸಬೇಕು. ನಿಗಧಿತ ಬೆಲೆಗಿಂತ ಅಧಿಕ ಹಣ ಪಡೆದರೆ ಹಾಗೂ ನಿಯಮಗಳ ಪಾಲನೆ ಮಾಡದಿದ್ದಲ್ಲಿ ಕಾನೂನು ಕ್ರಮ ಕೈಗೊಳಲಾಗುವುದು’ ಎಂದು ಎಚ್ಚರಿಸಿದರು.

ನರ್ಸರಿ ಮಾಲೀಕ ರಮೇಶ್ ಮಾತನಾಡಿ, ‘ನರ್ಸರಿ ಪರಿಕರಗಳ ಬೆಲೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಕಾರ್ಮಿಕರ ಕೂಲಿ ದುಪ್ಪಟ್ಟಾಗಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಸಸಿಗಳ ರಕ್ಷಣೆಗೆ ಜನರೇಟರ್ ಬಳಸಿ ನೀರು ಪೂರೈಸಲಾಗುತ್ತಿದೆ. ರೈತರಿಗೂ ಭಾರವಾಗದಂತೆ ಮನಗೂ ನಷ್ಟವಾಗದಂತೆ ನ್ಯಾಯಯುತ ದರ ನಿಗದಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶಂಕ್ರಪ್ಪ ಜೆ., ಜಂಟಿ ತೋಟಗಾರಿಕೆ ನಿರ್ದೇಶಕ ಶಶಿಕಾಂತ್ ಕೋಟಿಮನೆ ಮಾತನಾಡಿದರು. ಹಗರಿ ಕೃಷಿ ವಿಜ್ಞಾನ ಕೇಂದ್ರದ ರೋಗಶಾಸ್ತ್ರ ತಜ್ಞ ಆನಂದ, ಕೀಟಶಾಸ್ತ್ರ ತಜ್ಞ ಗೋವಿಂದ ಅವರು ನರ್ಸರಿ ನಿರ್ವಹಣೆ ಕುರಿತು ಮಾಹಿತಿ ನೀಡಿದರು.

ಸಹಾಯಕ ತೋಟಗಾರಿಕೆ ನಿರ್ದೇಶಕ ಪಿ.ಟಿ.ವಸಂತ್, ಸಹಾಯಕ ತೋಟಗಾರಿಕೆ ಅಧಿಕಾರಿ ರಾಘವೇಂದ್ರ, ಕಿರಣ್ ಎಚ್. ಚೌರದ್, ಪ್ರಾಂತ ರೈತ ಸಂಘದ ಅಧ್ಯಕ್ಷ ಗಾಳಿ ಬಸವರಾಜ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-727582043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.