ಕುರುಗೋಡು: ಇಲ್ಲಿನ ಪೊಲೀಸ್ ಸಿಬ್ಬಂದಿ ಬುಧವಾರ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ಬುಧವಾರ ಜಾಗೃತಿ ಜಾಥಾ ನಡೆಸಿದರು.

ಪೊಲೀಸ್ ಠಾಣೆ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿದರು.

ಹೆಲ್ಮೆಟ್ ರಹಿತ ವಾಹನ ಚಾಲನೆ ಸಾವಿಗೆ ಆಹ್ವಾನ ನೀಡಿದಂತೆ, ಹೆಲ್ಮೆಟ್ ಧರಿಸಿ ಸುರಕ್ಷಿತ ಚಾಲನೆ ಮಾಡಿ ಎನ್ನುವ ಘೋಷಣೆಗಳನ್ನು ಕೂಗಿದರು. ಜಾಗೃತಿ ಮಾಹಿತಿ ಇರುವ ಕರಪತ್ರಗಳನ್ನು ಹಂಚಿಕೆ ಮಾಡಿದರು.

ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಪೊಲೀಸ್ ವೃತ್ತ ನಿರೀಕ್ಷಕ ಬಾಳನಗೌಡ ಎಸ್. ಮಾನಶೆಟ್ಟಿ ಮಾತನಾಡಿ,ಸವಾರರು ಕಡ್ಡಾಯವಾಗಿ ವಾಹನದ ದಾಖಲೆ ಪತ್ರ ಮತ್ತು ವಿಮಾ ದಾಖಲೆಗಳನ್ನು ಜತೆಗಿರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಿಎಸ್ಐ ಸುಪ್ರಿತ್ ಮಾತನಾಡಿ, ಕಾನೂನಿನ ಭಯಕ್ಕಾಗಿ ಹೆಲ್ಮೆಟ್ ಧರಿಸುವುದಲ್ಲ. ನಿಮ್ಮನ್ನು ನಂಬಿ ಬದುಕು ಕಟ್ಟಿಕೊಂಡಿರುವ ಕುಟುಂಬದ ಸದಸ್ಯ ಹಿತಕ್ಕಾಗಿ ಧರಿಸಬೇಕು ಎಂದು ಸಲಹೆ ನೀಡಿದರು. ಮಹಿಳಾ ಪಿಎಸ್ಐ ಕರೆಮ್ಮ ಮತ್ತು ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-25-1018586359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.