ಕುರುಗೋಡು: ಇಲ್ಲಿನ ಪುರಸಭೆ ಸದಸ್ಯರಿಗೆ ಬೆಂಗಳೂರಿನ ಜನಗ್ರಹ ಸಂಸ್ಥೆ ವತಿಯಿಂದ ಸೋಮವಾರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರಕ್ಕೆ ಚಾಲನೆ ನೀಡಿದ ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ ಮಾತನಾಡಿ, ‘ದಿನನಿತ್ಯ ಮನೆಯಲ್ಲಿನ ಕಸವನ್ನು ನಾಲ್ಕು ವಿಧದಲ್ಲಿ ಬೇರ್ಪಡಿಸಿ ಪುರಸಭೆ ವಾಹನಕ್ಕೆ ಕೊಡುವ ಬಗ್ಗೆ ಸದಸ್ಯರು ತಮ್ಮ ವಾರ್ಡ್ಗಳಲ್ಲಿ ಮನವರಿಕೆ ಮಾಡಬೇಕು’ ಎಂದು ಸಲಹೆ ನೀಡಿದರು.

ಜನಸಂಗ್ರಾಮ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಲ್. ಮಂಜುನಾಥ ಮಾತನಾಡಿ, ‘ಸದಸ್ಯರು ತಮಗೆ ಬರುವ ಅನುದಾನವನ್ನು ಬಳಕೆ ಮಾಡಿಕೊಳ್ಳುವುದು ಮಾತ್ರವಲ್ಲ. ಅಭಿವೃದ್ಧಿಯ ಜತೆಗೆ ತ್ಯಾಜ್ಯ ವಿಲೇವಾರಿ ಮಾಡಲು ವಾರ್ಡ್ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.

ತಾಂತ್ರಿಕ ಸಲಹೆಗಾರ ಲೋಕೇಶ್ ಅವರು ‘ಘನತ್ಯಾಜ್ಯ ವಿಲೇವಾರಿ ನಿಯಮ 2026’ ಕುರಿತು ಮಾಹಿತಿ ನೀಡಿದರು. ಪುರಸಭೆ ಅಧ್ಯಕ್ಷ ಜಿ. ಮಂಜುನಾಥ, ಉಪಾಧ್ಯಕ್ಷೆ ನಾಗವೇಣಿ ಅಂಜಿನಪ್ಪ, ಪುರಸಭೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-25-541143545

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.