ಕುರುಗೋಡು: ಇಲ್ಲಿನ ಪುರಸಭೆಗೆ 1ನೇ ವಾರ್ಡಿನ ಸದಸ್ಯ ಮಂಜುನಾಥ ಮತ್ತು 19ನೇ ವಾರ್ಡಿನ ಸದಸ್ಯೆ ನಾಗವೇಣಿ ಇವರು ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

ಟಿ.ಶೇಖಣ್ಣ ಮತ್ತು ಕೆ. ಮಲ್ಲಿಕಾರ್ಜುನ ಇವರು ವೈಯಕ್ತಿಕ ಕಾರಣದಿಂದ ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತೆರವಾದ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.

ನಿಗದಿತ ಅವಧಿಯೊಳಗೆ ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಮತ್ತು ಸಾಮಾನ್ಯ ವರ್ಗಕ್ಕೆ ಮೀಸಲಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ನಾಗವೇಣಿ ಇವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ನರಸಪ್ಪ ತಹಶೀಲ್ದಾರ್ ಅವಿರೋಧ ಆಯ್ಕೆಘೋಷಣೆ ಮಾಡಿದರು.

15 ಕಾಂಗ್ರೆಸ್, 7 ಬಿಜೆಪಿ ಮತ್ತು ಒಬ್ಬರು ಪಕ್ಷೇತರ ಸೇರಿ ಒಟ್ಟು 23 ಜನ ಸದಸ್ಯರಿದ್ದಾರೆ.

ಎಲ್ಲ ಸದಸ್ಯರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ಅವಿರೋಧ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮೆರವಣಿಗೆ ಮಾಡಿ ಅಭಿಮಾನ ಮೆರೆದರು.

ಶಾಸಕ ಜೆ.ಎನ್.ಗಣೇಶ್ ಮತ್ತು ಪುರಸಭೆ ಮುಖಾಧಿಕಾರಿ ದತ್ತಾತ್ರೇಯ ಹೆಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-25-1299077507

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.