ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಇಂಗ್ಲಿಷ್ ಭಾಷೆ ಬೆಳವಣಿಗೆಗೆ ಲ್ಯಾಬ್ ಆರಂಭ ಶೀಘ್ರ’

ಶಾಸಕ ಎಲ್.ಕೃಷ್ಣನಾಯ್ಕ ಭರವಸೆ
Published 16 ಜನವರಿ 2024, 15:12 IST
Last Updated 16 ಜನವರಿ 2024, 15:12 IST
ಅಕ್ಷರ ಗಾತ್ರ

ಹೂವಿನಹಡಗಲಿ: ಇಂಗ್ಲಿಷ್ ಬೆಳೆವಣಿಗೆಗೆ ತಾಲ್ಲೂಕಿನ ಎಲ್ಲ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೀಘ್ರದಲ್ಲೇ ಲ್ಯಾಬ್ ಆರಂಭಿಸುವುದಾಗಿ ಶಾಸಕ ಎಲ್.ಕೃಷ್ಣನಾಯ್ಕ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮಂಗಳವಾರ ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದಿಂದ ಆಯೋಜಿಸಿದ್ದ ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇಂಗ್ಲಿಷ್ ಭಾಷೆಯ ಸಂವಹನಕ್ಕಾಗಿ ಲ್ಯಾಬ್ ಅಗತ್ಯ ಇದೆ. ಶಿಕ್ಷಣದಿಂದ ಮಾತ್ರ ಮಕ್ಕಳ ವಿಕಾಸ ಸಾಧ್ಯ ಎಂದರು.

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ವಿದ್ಯಮಾನಗಳ ಅರಿವು ಅಗತ್ಯವಾಗಿರುವ ನಿಟ್ಟಿನಲ್ಲಿ ಕಂಪ್ಯೂಟರ್ ವಿತರಿಸುವ ಯೋಜನೆ ಜಾರಿಗೆ ತರಲಾಗುವುದು. ಈ ಬಾರಿಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಮುಖ್ಯಶಿಕ್ಷಕರು ಇಲಾಖೆಯ ಯೋಜನೆ ಜಾರಿಗೆ ಶ್ರಮವಹಿಸಬೇಕು. ಜಿಲ್ಲೆಯಲ್ಲಿ ತಾಲ್ಲೂಕು ಪ್ರಥಮ ಸ್ಥಾನ ಗಳಿಸುವ ಹಾಗೆ ವಿದ್ಯಾರ್ಥಿಗಳನ್ನು ತಯಾರಿಸಬೇಕು ಎಂದರು.

ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಜಯರಾಂ ಚೌವ್ಹಾಣ್, ಬಿಇಒ ಮಹೇಶ್.ವಿ ಪೂಜಾರ ಮಾತನಾಡಿದರು.

ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಪಿ.ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಸಮನ್ವಯಾಧಿಕಾರಿ ಎ.ಕೋಟೆಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ.ಹನುಮಂತಪ್ಪ, ಟಿಪಿಒ ಎಸ್.ಮುಸ್ತಫಾ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಶಿವಲಿಂಗಪ್ಪ, ಶೇಕ್ ಅಹ್ಮದ್, ಸರ್ವಮಂಗಳ, ಕೃಷ್ಣಪ್ಪ ಜಾಡರ, ಗ್ರಂಥಾಲಯ ಅಧಿಕಾರಿ ಮಂಜುನಾಥ ಬೋವಿ, ಸುರೇಶ ಅಂಗಡಿ, ಬನ್ನೆಪ್ಪ ಕೊಳಚಿ, ಸೂರ್ಯಕಾಂತ, ಎನ್ ಹಾಲೇಶ್ ಇದ್ದರು.

ತಾಲ್ಲೂಕಿನ 50 ಪ್ರೌಢಶಾಲೆಗಳಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT