ಬಳ್ಳಾರಿ: ‘ಕೈಗಾರಿಕೆ ಸ್ಥಾಪನೆಗೆಂದು ವಶಪಡಿಸಿಕೊಂಡ ಭೂಮಿಗೆ ನ್ಯಾಯಯುತ ಬೆಲೆ ನೀಡಬೇಕೆಂದು ಆರಂಭವಾದ ರೈತರ ಹೋರಾಟ ಸಾವಿರ ದಿನಗಳನ್ನು ದಾಟಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಸರ್ಕಾರದ ನಡೆ ಖಂಡಿಸಿ ಮಾರ್ಚ್ 7ರಂದು ಕುಡುತಿನಿ ಹಾಗೂ ವೇಣಿವೀರಾಪುರದ ಬಳಿ ಹೆದ್ದಾರಿ ತಡೆ ಚಳವಳಿ ನಡೆಸಲಾಗುವುದು’ ಎಂದು ಭೂ ಸಂತ್ರಸ್ತರ ಹೋರಾಟ ಸಮಿತಿ ಗೌರವಾಧ್ಯಕ್ಷ ಯು.ಬಸವರಾಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಆಗಲೂ ಸರ್ಕಾರ ಹೋರಾಟವನ್ನು ನಿರ್ಲಕ್ಷಿಸಿದರೆ ಜಿಲ್ಲೆಯ ನಾನಾ ಪ್ರಗತಿಪರ ಸಂಘ, ಸಂಸ್ಥೆಗಳು, ನಾಗರಿಕರು ಹಾಗೂ ರೈತ ಕೂಲಿ ಕಾರ್ಮಿಕರ ಬೆಂಬಲ ಪಡೆದು ಏ.7ರಂದು ಬಳ್ಳಾರಿ ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

‘ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗ ನೀಡುವ ಭರವಸೆ ಮಣ್ಣು ಪಾಲು ಮಾಡಲಾಗಿದೆ. ಇದರಿಂದ ರೈತರು ಅತಂಕಕ್ಕೆ ಈಡಾಗಿದ್ದಾರೆ. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು’ ಎಂದರು.

ಮುಖಂಡರಾದ ಚಂದ್ರಕುಮಾರಿ, ಜಿ.ಸತ್ಯಬಾಬು, ಆನಂದಕುಮಾರ್, ವೀರೇಶ್, ಜಗದೀಶ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.