ಬಳ್ಳಾರಿ: ವಚನಕಾರರಲ್ಲಿ ಒಬ್ಬರಾದ ಶಿವಯೋಗಿ ಶರಣ ಸಿದ್ದರಾಮೇಶ್ವರರ ಕಾಯಕಯೋಗಿ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳೋಣ ಎಂದು ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಶಿವಯೋಗಿ ಸಿದ್ಧರಾಮೇಶ್ವರರ 853ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಸಿದ್ದರಾಮೇಶ್ವರರ ತತ್ವವು ಮನುಕುಲದ ಸೇವೆ, ಶಿವಯೋಗದ ಮಾರ್ಗವಾಗಿತ್ತು. ವಚನ ಸಾಹಿತ್ಯವನ್ನು ವಿನಾಶದಿಂದ ಪಾರು ಮಾಡುವಲ್ಲಿ ಸಿದ್ದರಾಮೇಶ್ವರರೂ ಒಬ್ಬರಾಗಿದ್ದರು’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಮಾತನಾಡಿ, ‘ಸಿದ್ದರಾಮೇಶ್ವರರು ಜಾತಿ ಮತ್ತು ಲಿಂಗ ತಾರತಮ್ಯದ ಕುರುಡು ಸಂಪ್ರದಾಯಗಳನ್ನು ತಿರಸ್ಕರಿಸಿದ್ದರು. ಸಾಕ್ಷರತೆಗೆ ಒತ್ತು ನೀಡಿದ್ದರು. ಸಮ ಸಮಾಜ ಕಟ್ಟುವಲ್ಲಿ ಕನಸು ಕಂಡಿದ್ದ’ ಎಂದು ಹೇಳಿದರು.

‘ಬಸವಣ್ಣ, ಅಲ್ಲಮಪ್ರಭು, ಅಕ್ಕಮಹಾದೇವಿಯವರಂಥ 12 ನೇ ಶತಮಾನದ ವಚನ ಸಾಹಿತ್ಯಕಾರರ ಸಾಲಿನಲ್ಲಿ ಸಿದ್ದರಾಮೇಶ್ವರರು ಅವರೂ ಪ್ರಮುಖರು’ ಎಂದು ತಿಳಿಸಿದರು.

ಹೊಸಪೇಟೆಯ ವಿಜಯನಗರ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಗಾದೆಪ್ಪ ಮಾತನಾಡಿ, ‘ಸಿದ್ದರಾಮೇಶ್ವರರು ಕ್ರಿ.ಶ 12ನೇ ಶತಮಾನದ ಶರಣರ ಪರಂಪರೆಯಲ್ಲಿ ಗುರುತಿಸಿಕೊಂಡವರು. ತನ್ನ ಸ್ವಂತ ಕಾಯಕದ ಮೂಲಕ ಅಪ್ರತಿಮ ಶರಣನಾಗಿ ರೂಪಗೊಂಡವರು. ಸಿದ್ದರಾಮೇಶ್ವರರು ಸೊನ್ನಲಿಗೆ ಎಂಬ ಪುಟ್ಟ ಹಳ್ಳಿಯಲ್ಲಿ (ಮಹಾರಾಷ್ಟ್ರದ ಸೊಲ್ಲಾಪುರ) ಜನಿಸಿದವರು. ಅವರ ತಂದೆ ಮುದ್ದುಗೌಡ, ತಾಯಿ ಸುಗ್ಗವ್ವ. ಸಿದ್ಧರಾಮೇಶ್ವರರು ವಚನಗಳನ್ನು ರಚಿಸಿರುವುದು ಮಾತ್ರವಲ್ಲದೆ, ವಚನ ಸಂರಕ್ಷಣೆಯೂ ಮಾಡಿದ್ದಾರೆ. ಕೆರೆ, ಕಟ್ಟೆ ಕಟ್ಟಿಸಿ ಜನೋಪಯೋಗಿ ಕಾರ್ಯ ಕೈಗೊಂಡರು. ಶರಣತತ್ವದ ಪರಿಪಾಲಕರಾಗಿದ್ದರು’ ಎಂದರು.

ಅದ್ದೂರಿ ಮೆರವಣಿಗೆ: ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಅದ್ದೂರಿ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಚಾಲನೆ ನೀಡಿದರು.

ವಿಭಾಗೀಯ ಅಧಿಕಾರಿ ಪ್ರಮೋದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ವಿ.ರಾಮಾಂಜನೇಯ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಸಮುದಾಯದ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.

‘ಸಮಾನತೆ ಸಂದೇಶ ಸಾರಿದ ಮಹಾನುಭಾವ’

ಕಂಪ್ಲಿ: ಶಿವಯೋಗಿ ಸಿದ್ಧರಾಮೇಶ್ವರರು ಜಾತೀಯತೆ, ಆಚಾರ-ವಿಚಾರ ಎಂಬ ಮನೋಭಾವ ಬಿಟ್ಟು ನಾವೆಲ್ಲರೂ ಮನುಷ್ಯರು ಹಾಗೂ ಎಲ್ಲರೂ ಸಮಾನರು ಎಂಬ ಸಂದೇಶವನ್ನು ನೀಡಿದ ಮಹಾನುಭಾವರು ಎಂದು ಕಂಪ್ಲಿ ತಾಲ್ಲೂಕು ಬೋವಿ ಸಂಘದ ಅಧ್ಯಕ್ಷ ಸಾಮಿಲ್ ವಿ. ಶೇಖಪ್ಪ ತಿಳಿಸಿದರು.

ಇಲ್ಲಿಯ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಶಿವಯೋಗಿ ಸಿದ್ಧರಾಮೇಶ್ವರರ 853ನೇ ಜಯಂತ್ಯುತ್ಸವದಲ್ಲಿ ಮಾತನಾಡಿ, ತನ್ನನ್ನು ತಾನು ಅರಿತು ಬಾಳಿದ ಸಿದ್ದರಾಮೇಶ್ವರರು ಕೆರೆ, ಕಾಲುವೆ, ದೇವಸ್ಥಾನ ನಿರ್ಮಿಸುವ ಮೂಲಕ ಕರ್ಮ ಮಾರ್ಗದಲ್ಲಿ ಸಾಗಿ ಮಾನವ ಜನ್ಮ ಸಾರ್ಥಕ ಎಂದು ನಿರೂಪಿಸಿದ್ದಾರೆ ಎಂದರು.

ಬೋವಿ ಸಂಘದ ಗೌರವ ಅಧ್ಯಕ್ಷ ಎ.ವಿ.ಗೋವಿಂದರಾಜು ಮಾತನಾಡಿ, ಬೋವಿ ಸಮುದಾಯ ಭವನಕ್ಕೆ ಶಾಸಕರು ಅನುದಾನ ಮಂಜೂರು ಮಾಡಬೇಕು. ಪಟ್ಟಣದ ವೃತ್ತ, ರಸ್ತೆಗಳಿಗೆ ಸಿದ್ಧರಾಮೇಶ್ವರರ ಹೆಸರು ನಾಮಕರಣ ಮಾಡುವಂತೆ ಮನವಿ ಮಾಡಿದರು.

ಕಂಪ್ಲಿ ತಾಲ್ಲೂಕು ಬೋವಿ ಸಂಘದ ಕಚೇರಿಯಲ್ಲಿಯೂ ಸಿದ್ಧರಾಮೇಶ್ವರ ಜಯಂತ್ಯುತ್ಸವ ಜರುಗಿತು.
ತಹಶೀಲ್ದಾರ್ ಶಿವರಾಜ, ಬೋವಿ ಸಂಘದ ಪದಾಧಿಕಾರಿಗಳಾದ ಎಂ. ಹುಲುಗಪ್ಪ, ವೆಂಕಟರಮಣ, ವಿ. ಗುರಪ್ಪ, ವಿ. ಸತ್ಯಪ್ಪ, ವಿ.ಬಿ. ನಾಗರಾಜ, ಎಸ್.ವಿ. ಗೋವಿಂದರಾಜ, ಮೌನೇಶ್, ತಿಪ್ಪೇಸ್ವಾಮಿ, ಬಂಡಿ ತಿಮ್ಮಪ್ಪ, ಸತೀಶ್, ಗ್ರೇಡ್-2 ತಹಶೀಲ್ದಾರ್ ಎಂ.ಆರ್. ಷಣ್ಮುಖ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಸಿದ್ಧರಾಮ ಶಿವಯೋಗಿ ಭಾವಚಿತ್ರಕ್ಕೆ ನಮನ

ಸಿರುಗುಪ್ಪ: ಶಿವಯೋಗಿ ಸಿದ್ದರಾಮೇಶ್ವರ ಅವರು ಸಕಲ ಜೀವರಾಶಿಗಳ ನೆಮ್ಮದಿಯ ಬದುಕಿಗಾಗಿ ಕೆರೆ ಕಟ್ಟೆಗಳನ್ನು ಕಟ್ಟಿಸುವ ಕಾಯಕದಲ್ಲಿ ತೊಡಗಿ ಕರ್ಮಯೋಗಿ ಎನಿಸಿಕೊಂಡರು” ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.

ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಮಂಗಳವಾರ ಶಿವಯೋಗಿ ಸಿದ್ದರಾಮೇಶ್ವರರ 853ನೇ ಜಯಂತಿ ಅಂಗವಾಗಿ ಕಾಯಕಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಬಿಜೆಪಿ ತಾಲ್ಲೂಕ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಮುಖಂಡರಾದ ಟಿ.ದರಪ್ಪ ನಾಯಕ, ನಟರಾಜ್, ಮುದಿಯಪ್ಪ, ವಿಕ್ರಂ ಜೈನ್, ಬಂಡ್ರಹಾಳ ಮಲ್ಲಿಕಾರ್ಜುನ್, ರಾಮರಾಜ, ವೈ.ಡಿ.ವೆಂಕಟೇಶ, ಅಂಗೈಯಪ್ಪ, ವೈ.ಶಂಕ್ರಪ್ಪ ಇದ್ದರು.

‘ಸಿದ್ಧರಾಮೇಶ್ವರರ ಉಪದೇಶ ಜೀವನಕ್ಕೆ ಸಹಕಾರಿ’ ಸಿರುಗುಪ್ಪ: ಬಸವತತ್ವದ ವೈಚಾರಿಕ ಚಿಂತೆನೆಯಲ್ಲಿ ಸಿದ್ದರಾಮೇಶ್ವರ ಅವರು ಉಪದೇಶಿಸಿರುವ ಜ್ಞಾನ ಸಂದೇಶಗಳನ್ನು ತನುಮನಗಳಲ್ಲಿ ಕ್ರಿಯಾತ್ಮಕವಾಗಿ ರೂಪಿಸಿಕೊಳ್ಳುವ ಪ್ರಯತ್ನ ಮಾಡಿದಲ್ಲಿ ನಿಜಕ್ಕೂ ಜೀವನಕ್ಕೆ ಅರ್ಥಪೂರ್ಣ ಎನಿಸುತ್ತವೆ ಎಂದು ತಹಶೀಲ್ದಾರ ಎಚ್.ವಿಶ್ವನಾಥ ಹೇಳಿದರು. ನಗರದ ನೇತಾಜಿ ವ್ಯಾಯಾಮ ಶಾಲೆಯಲ್ಲಿ ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯತಿ ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಿದ್ದರಾಮೇಶ್ವರ ಭೋವಿ ಸಂಘದ ಸಹಯೋಗದಲ್ಲಿ ಮಂಗಳವಾರ ನಡೆದ ಶ್ರೀಶಿವಯೋಗಿ ಸಿದ್ದರಾಮೇಶ್ವರರ 853ನೇ ಜಯಂತಿಯ ಸಮಾರಂಭ ದಲ್ಲಿ ಮಾತನಾಡಿದರು. ‘ಮನಸ್ಸನ್ನು ಶುದ್ಧವಾಗಿಟ್ಟುಕೊಂಡು ಸನ್ಮಾರ್ಗದ ಹಾದಿಯಲ್ಲಿ ಸಾಗುವ ಸಾಧಕನೇ ನಿಜಾರ್ಥದಲ್ಲಿ ಪಾವನ' ಎಂದು ಜನಮಾನಸಕ್ಕೆ ಉಪದೇಶಿಸಿದವರು ಶಿವಯೋಗಿ ಸಿದ್ಧರಾಮೇಶ್ವರ’ ಅವರು ಎಂದರು. ಎಸ್.ಎಸ್.ಇ.ಪದವಿ ಪೂರ್ವ ಕಾಲೇಜ್ ಉಪನ್ಯಾಸಕ ಎಂ.ಪಂಪಾಪತಿ ಅವರಿಂದ ಶಿವಯೋಗಿ ಸಿದ್ದರಾಮೇಶ್ವರ ಜೀವನ ಮತ್ತು ಸಾಧನೆ ಕುರಿತು ಉಪನ್ಯಾಸ ನೀಡಿದರು. ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ತಾಲ್ಲೂಕು ಮೈದಾನದಿಂದ ಕನಕದಾಸ ವೃತ್ತ ವಾಲ್ಮೀಕಿ ವೃತ್ತ ಸಿದ್ದರಾಮೇಶ್ವರ ವೃತ್ತ ಮಹಾತ್ಮ ಗಾಂಧಿ ವೃತ್ತದ ಮೂಲಕ ನೇತಾಜಿ ವ್ಯಾಯಾಮ ಶಾಲೆಯ ವೇದಿಕೆಯವರೆಗೆ ಶ್ರೀಸಿದ್ದರಾಮೇಶ್ವರ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ ಸಿದ್ದರಾಮೇಶ್ವರ ಭೋವಿ ಸಂಘದ ತಾ.ಅಧ್ಯಕ್ಷ ಜಿ.ಗಾಳೆಪ್ಪ ವಾಲ್ಮೀಕಿ ವಿದ್ಯಾಭಿವೃದ್ದಿ ಸಂದ ಅಧ್ಯಕ್ಷ ಬಿ.ಎಂ.ಸತೀಶ್ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಗುರಪ್ಪ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಡ್ಡೇರು ಸಿದ್ದಯ್ಯ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೊಡ್ಲೆಮಲ್ಲಿಕಾರ್ಜುನ ನಿವೃತ್ತ ಮುಖ್ಯಗುರು ಹನುಮಂತಪ್ಪ ನಗರಸಭೆ ಸದಸ್ಯರಾದ ಶ್ವೇತ ನಟರಾಜ ರಾಮಕೃಷ್ಣ ಮುಖಂಡರಾದ ಟಿ.ಧರಪ್ಪ ನಾಯಕ ರಾಮರಾಜ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.