ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ವಿಶ್ವ ವಿಜ್ಞಾನಿಗಳ ಪಟ್ಟಿ: ವಿಎಸ್‌ಕೆಯುನ ಮೂವರಿಗೆ ಸ್ಥಾನ

Published : 20 ಸೆಪ್ಟೆಂಬರ್ 2024, 15:26 IST
Last Updated : 20 ಸೆಪ್ಟೆಂಬರ್ 2024, 15:26 IST
ಫಾಲೋ ಮಾಡಿ
Comments

ಬಳ್ಳಾರಿ: ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ವಾರ್ಷಿಕ ಪಟ್ಟಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.

ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಹನುಮೇಶ್ ವೈದ್ಯ ಸತತ ಎರಡನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ. 

ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನ, ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ವಾರ್ಷಿಕ ಪಟ್ಟಿ ಬಿಡುಗಡೆ ಮಾಡುತ್ತದೆ.

ಗುಣಮಟ್ಟದ ಸಂಶೋಧನಾ ಲೇಖನಗಳಿಗೆ ಹೆಸರುವಾಸಿಯಾಗಿರುವ ‘ಎಲ್ಸ್ವೀಯರ್’ ಎಂಬ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ವಿವಿಧ ವರ್ಗಗಳಲ್ಲಿ ಆಯ್ಕೆ ಮಾಡಲಾಗಿದೆ. 

ಅಶ್ವಿನ್‌ ಪಿ.
ಅಶ್ವಿನ್‌ ಪಿ.
ಹನುಮೇಶ್‌ ವೈದ್ಯ
ಹನುಮೇಶ್‌ ವೈದ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT