ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಅನಿರ್ಧಿಷ್ಟಾವಧಿ ಧರಣಿ ಆರಂಭ

Published 19 ಜೂನ್ 2024, 16:04 IST
Last Updated 19 ಜೂನ್ 2024, 16:04 IST
ಅಕ್ಷರ ಗಾತ್ರ

ಕಂಪ್ಲಿ: ಅಂಗನವಾಡಿಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಆರಂಭಿಸಬೇಕು ಎಂದು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಸಮಿತಿಯಿಂದ ತಾಲ್ಲೂಕು ಕಚೇರಿ ಎದುರಿಗೆ ಬುಧವಾರದಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭಗೊಂಡಿತು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಚ್.ಮಂಜುಳಾ ಮಾತನಾಡಿ, ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ಸರ್ಕಾರಿ ಶಾಲೆಯಲ್ಲಿ ಆರಂಭಿಸುವ ಇಲಾಖೆ ಆದೇಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಮುಂದೊಂದು ದಿನ ಮಕ್ಕಳ ಸಂಖ್ಯೆ ಕಡಿಮೆಯಾಗಿ ಕೇಂದ್ರಗಳನ್ನೇ ಬಂದ್ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿದರು.

ಅಂಗನವಾಡಿಗಳಲ್ಲಿ ಮಕ್ಕಳ ಪೂರ್ವ ಪ್ರಾಥಮಿಕ ಶಿಕ್ಷಣದೊಂದಿಗೆ ಆರೋಗ್ಯ ಕಾಳಜಿ, ಅಪೌಷ್ಟಿಕತೆ ಬಗ್ಗೆ ಕಾಳಜಿವಹಿಸುವ ಕಾರಣ ಅಂಗನವಾಡಿಗಳಲ್ಲೇ ಈ ತರಗತಿಗಳನ್ನು ಆರಂಭಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಸಿಐಟಿಯು ಪ್ರಧಾನ ಕಾರ್ಯದರ್ಶಿ ಜೆ.ಎಂ.ಚನ್ನಬಸಯ್ಯ, ತಾಲ್ಲೂಕು ಸಮಿತಿ ಪದಾಧಿಕಾರಿಗಳಾದ ಬಿ.ಕೆ.ಉಮಾದೇವಿ, ಸಿ.ರಾಧಾಬಾಯಿ, ಎಂ.ಗುರುಪಾದಮ್ಮ, ವಿ.ನಾಜೀರಾ ಪರ್ವೀನ್, ಎಂ.ನಾಗಮ್ಮ, ಎಚ್.ತಿಪ್ಪಮ್ಮ, ಸಿ.ಶಾಂತಮ್ಮ, ಎಚ್.ಶಂಕ್ರಮ್ಮ, ಅಕ್ಕಮಹಾದೇವಿ, ಅಂಜಲಿ, ಎನ್.ಅನುರಾಧ, ಎಸ್.ಹುಲಿಗೆಮ್ಮ, ಮಂಜುಳಾ, ರಸೂಲ್‍ಬೀ, ಬಿ.ಹುಲಿಗೆಮ್ಮ ಸೇರಿದಂತೆ ತಾಲ್ಲೂಕಿನ 200 ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT