ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೂತ್ ಮಟ್ಟದಲ್ಲಿ ಕೆಲಸ ಮಾಡಿ: ಮಂಜುನಾಥ ಕನಕಗಿರಿ

Published 7 ಏಪ್ರಿಲ್ 2024, 13:20 IST
Last Updated 7 ಏಪ್ರಿಲ್ 2024, 13:20 IST
ಅಕ್ಷರ ಗಾತ್ರ

ಹರಪನಹಳ್ಳಿ: ‘ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಬೂತ್ ಹಂತದಲ್ಲಿ ಕೆಲಸ ಮಾಡಿ’ ಎಂದು ದಾವಣಗೆರೆ ಲೋಕಸಭೆ ಕ್ಷೇತ್ರದ ವಿಸ್ತಾರಕ ಮಂಜುನಾಥ ಕನಕಗಿರಿ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮಂಡಲ ಪದಾಧಿಕಾರಿಗಳನ್ನು ಶೀಘ್ರ ರಚಿಸಿ, ಕಾರ್ಯಕರ್ತರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದರು.

ಮಂಡಲ ಅಧ್ಯಕ್ಷ ಕೆ.ಲಕ್ಷ್ಮಣ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಸಹಕಾರ ಪ್ರಕೋಷ್ಟ ಸಹ ಸಂಚಾಲಕ ಜಿ.ನಂಜನಗೌಡ, ಜಿಲ್ಲಾ ಉಪಾಧ್ಯಕ್ಷ ಚೆನ್ನನಗೌಡ, ಮುಖಂಡರಾದ ಎಂ.ಪಿ.ನಾಯ್ಕ, ಬಾಗಳಿ ಕೊಟ್ರೇಶಪ್ಪ, ಆರುಂಡಿ ನಾಗರಾಜ, ಎಚ್.ಎಂ.ಅಶೋಕ, ಸತ್ತೂರು ಹಾಲೇಶ, ಕಣಿವಿಹಳ್ಳಿ ಮಂಜುನಾಥ, ಎಲ್.ಮಂಜನಾಯ್ಕ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT