ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟ ಭರವಸೆ ಈಡೇರಿಸುವ ಕಾಂಗ್ರೆಸ್‍ ಗೆ ಮತ ನೀಡಿ: ಡಾ. ಪ್ರಭಾ ಮಲ್ಲಿಕಾರ್ಜುನ್

Published 20 ಏಪ್ರಿಲ್ 2024, 15:42 IST
Last Updated 20 ಏಪ್ರಿಲ್ 2024, 15:42 IST
ಅಕ್ಷರ ಗಾತ್ರ

ಹರಪನಹಳ್ಳಿ: ಲೋಕಸಭೆ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ ಎಂದು ದಾವಣಗೆರೆ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಶನಿವಾರ ತಾಲ್ಲೂಕಿನ ಅಡವಿಹಳ್ಳಿ, ಕೂಲಹಳ್ಳಿ, ತೊಗರಿಕಟ್ಟೆ, ಮಾಡಲಗೇರೆ, ಹಾರಕನಾಳು ಗ್ರಾಮಗಳಲ್ಲಿ ಬಿರುಸಿನ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದರು.ಯಾವತ್ತು ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಪಕ್ಷ ಕಾಂಗ್ರೆಸ್. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯುವ ನ್ಯಾಯ, ನಾರಿ ನ್ಯಾಯ, ರೈತ ನ್ಯಾಯ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಎಲ್ಲ ಅಶ್ವಾಸನೆಗಳ್ನು ಈಡೇರಿಸುವುದು ಗ್ಯಾರಂಟಿ ಎಂದು ಹೇಳಿದರು.

ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಮಾತನಾಡಿ, ಸಾಮಾಜಿಕ ನ್ಯಾಯವನ್ನು ಪ್ರತಿಪಾದಿಸುವ ಪಕ್ಷ ಕಾಂಗ್ರೆಸ್. ವಿದಾನಸಭೆ ಚುನಾವಣೆ ಮುಕ್ತಾಯದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ, ಯುವಕರಿಗೆ, ಬಡವರಿಗೆ, ರೈತರಿಗೆ ನೆರವಾಗುವಂತಹ ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಮನೆ ಮಾತಾಗಿದೆ. ಕಾಂಗ್ರೆಸ್ ಪಕ್ಷ ಗೆಲ್ಲಿಸಿದರೆ, ರಾಜ್ಯದ ಜನತೆಗೆ ಮತ್ತಷ್ಟು ಗ್ಯಾರಂಟಿಗಳು ಲಭಿಸುತ್ತವೆ ಎಂದರು.

ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಅರಸೀಕೆರೆ ಎನ್.ಕೊಟ್ರೇಶ್, ‘ಪಕ್ಷದ ಕಾರ್ಯಕರ್ತರು ಗುಂಪುಗಾರಿಕೆ ಮಾಡದೇ, ಒಗ್ಗಟ್ಟಿನಿಂದ ತಳಮಟ್ಟದಲ್ಲಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು. ಬ್ಲಾಕ್ ಸಮಿತಿ ಅಧ್ಯಕ್ಷರಾದ ಎಂ.ವಿ.ಅಂಜಿನಪ್ಪ, ಕೆ.ಕುಬೇರಪ್ಪ, ಮುಖಂಡರಾದ ಎಂ.ರಾಜಶೇಖರ, ಕೋಡಿಹಳ್ಳಿ ಭೀಮಪ್ಪ, ನಜೀರ್ ಸಾಬ್, ಷಣ್ಮುಖಪ್ಪ, ಎ.ಎಂ.ವಿಶ್ವನಾಥ, ಪೂಜಾರ್ ರಾಜು, ಗಣೇಶ್, ಪ್ರಕಾಶ್ ಪಾಟೀಲ್ ಇತರರಿದ್ದರು.

ಹರಪನಹಳ್ಳಿ ತಾಲ್ಲೂಕು ಅಡವಿಹಳ್ಳಿ ಗ್ರಾಮದಲ್ಲಿ ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕಿ ಲತಾ ಮಲ್ಲಿಕಾರ್ಜುನ್ ಎನ್.ಕೊಟ್ರೇಶ್ ಮತ್ತು ಮುಖಂಡರು ರೋಡ್ ಶೋ ನಡೆಸಿದರು.
ಹರಪನಹಳ್ಳಿ ತಾಲ್ಲೂಕು ಅಡವಿಹಳ್ಳಿ ಗ್ರಾಮದಲ್ಲಿ ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರವಾಗಿ ಶಾಸಕಿ ಲತಾ ಮಲ್ಲಿಕಾರ್ಜುನ್ ಎನ್.ಕೊಟ್ರೇಶ್ ಮತ್ತು ಮುಖಂಡರು ರೋಡ್ ಶೋ ನಡೆಸಿದರು.
ಶಾಸಕಿ ಲತಾ ಜೊತೆ ಕೊಟ್ರೇಶ್ ಪ್ರಚಾರದಲ್ಲಿ ಭಾಗಿ
ವಿದಾನಸಭೆ ಚುನಾವಣೆಯಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಅರಸೀಕೆರೆ ಎನ್.ಕೊಟ್ರೇಶ್ ಅವರು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ಅವರು ಜೊತೆಯಾಗಿ ದಾವಣಗೆರೆ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಪರ ಶನಿವಾರ ತಾಲ್ಲೂಕಿನಾದ್ಯಂತ ಮತಬೇಟೆಗೆ ಇಳಿದದ್ದು ಅಚ್ಚರಿ ಮೂಡಿಸಿತು. ಕಾಂಗ್ರೆಸ್‍ ಟಿಕೆಟ್‍ ಪಡೆಯುವಲ್ಲಿ ಯಶಸ್ವಿಯಾಗಿದ್ದ ಎನ್.ಕೊಟ್ರೇಶ್ ಅವರು ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಕಾಂಗ್ರೆಸ್ ಪಕ್ಷದಿಂದ ಬಂಡಾಯವೆದ್ದು ಪಕ್ಷೇತರರಾಗಿದ್ದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಶಾಸಕಿ ಆಯ್ಕೆಯಾಗಿದ್ದರು. ಪಕ್ಷದ ಯಾವುದೇ ಚಟುವಟಿಕೆಯಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದ ಲತಾ ಮಲ್ಲಿಕಾರ್ಜುನ್ ಮತ್ತು ಕೊಟ್ರೇಶ್ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ಒಟ್ಟಾಗಿರುವುದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತಸದಿಂದ ರೋಡ್ ಶೋದಲ್ಲಿ ಪಾಲ್ಗೊಳ್ಳುತ್ತಿರುವುದು ಕಂಡುಬಂದಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT