ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಲೋಕಸಭಾ ಕ್ಷೇತ್ರ: ಬಿ. ಶ್ರೀರಾಮುಲುಗೆ ಬಿಜೆಪಿ ಟಿಕೆಟ್‌

2014ರಲ್ಲಿ ಒಮ್ಮೆ ಲೋಕಸಭೆ ಪ್ರವೇಶಿಸಿದ್ದ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
Published 13 ಮಾರ್ಚ್ 2024, 16:21 IST
Last Updated 13 ಮಾರ್ಚ್ 2024, 16:21 IST
ಅಕ್ಷರ ಗಾತ್ರ

ಬಳ್ಳಾರಿ: ಮುಂಬರುವ ಲೋಕಸಭಾ ಚುನಾವಣೆಗೆ ಬಳ್ಳಾರಿ(ಎಸ್‌ಟಿ ಮೀಸಲು) ಕ್ಷೇತ್ರ ದಿಂದ ನಿರೀಕ್ಷೆಯಂತೆ ಮಾಜಿ ಸಚಿವ  ಬಿ. ಶ್ರೀರಾಮುಲು ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 2014ರಲ್ಲಿ ಒಮ್ಮೆ ಲೋಕಸಭೆ ಪ್ರವೇಶಿಸಿದ್ದ ಶ್ರೀರಾಮುಲು ಈ ಬಾರಿ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 

ಟಿಕೆಟ್ ಘೋಷಣೆಗೂ ಮುಂಚೆಯೇ ಶ್ರೀರಾಮುಲು ಅವರು ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರ ಆರಂಭಿಸಿದ್ದರು. ಟಿಕೆಟ್ ಘೋಷಣೆಯು ಪ್ರಚಾರ ಕಾರ್ಯಕ್ಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮತ್ತಷ್ಟು ಹುರುಪು ತುಂಬಿದೆ.

ಒಂದು ಹಂತದಲ್ಲಿ ರಾಯಚೂರು (ಎಸ್‌ಟಿ ಮೀಸಲು) ಕ್ಷೇತ್ರದಲ್ಲೂ ರಾಮುಲು ಅವರ ಹೆಸರು ಕೇಳಿ ಬಂದಿತ್ತು. ಬಳ್ಳಾರಿ ಮತ್ತು ರಾಯಚೂರು ಕ್ಷೇತ್ರಗಳಲ್ಲಿ ಶ್ರೀರಾಮುಲು ಅವರು ಸಮೀಕ್ಷೆ ನಡೆಸಿದ್ದು, ರಾಯಚೂರು ಅವರಿಗೆ ಪೂರಕವಾಗಿದೆ. ಅವರು ಅಲ್ಲಿಂದಲೇ ಸ್ಪರ್ಧಿಸುತ್ತಾರೆ ಎಂಬೆಲ್ಲ ಮಾತುಗಳು ಕೇಳಿ ಬಂದಿದ್ದವು. ಆದರೆ, ಅಂತಿಮವಾಗಿ ಪಕ್ಷದ ವರಿಷ್ಠರು ಶ್ರೀರಾಮುಲು ಅವರನ್ನು ಬಳ್ಳಾರಿಗೇ ನಿಯೋಜಿಸಿದ್ದಾರೆ.

ಕ್ಷೇತ್ರದ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರಗಳ ಪೈಕಿ (ಬಳ್ಳಾರಿ ನಗರ–ಕಾಂಗ್ರೆಸ್‌, ಬಳ್ಳಾರಿ ಗ್ರಾಮಾಂತರ –ಕಾಂಗ್ರೆಸ್‌, ಕಂಪ್ಲಿ–ಕಾಂಗ್ರೆಸ್‌, ಸಂಡೂರು–ಕಾಂಗ್ರೆಸ್‌, ಕೂಡ್ಲಿಗಿ–ಕಾಂಗ್ರೆಸ್‌, ವಿಜಯನಗರ–ಕಾಂಗ್ರೆಸ್‌,  ಹಗರಿಬೊಮ್ಮನಹಳ್ಳಿ–ಜೆಡಿಎಸ್‌, ಹೂವಿನಹಡಗಲಿ– ಬಿಜೆಪಿ) 6ರಲ್ಲಿ ಕಾಂಗ್ರೆಸ್‌ ಶಾಸಕರಿದ್ದರೆ, ತಲಾ ಒಂದೊಂದು ಕ್ಷೇತ್ರದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಪಕ್ಷಗಳು ಗೆದ್ದಿವೆ. ಕಳೆದ ಲೋಕಸಭಾ ಚುನಾವಣೆಗೆ ಹೋಲಿಸಿದರೆ, ಕ್ಷೇತ್ರ ವ್ಯಾಪ್ತಿಯಲ್ಲಿ ಕೈ ಬಲ ಹೆಚ್ಚಾಗಿದೆ. 

ಇನ್ನು ತಮಗೆ ಟಿಕೆಟ್‌ ಕೈತಪ್ಪಿದ್ದರ ಬಗ್ಗೆ ಪ್ರತಿಕ್ರಿಯಿಸಿರು ಸಂಸದ ವೈ. ದೇವೇಂದ್ರಪ್ಪ, ಸಹಜವಾಗಿಯೇ ನಾನೂ ಆಕಾಂಕ್ಷಿಯಾಗಿದ್ದೆ. ಪಟ್ಟಿಯಲ್ಲಿ ನನ್ನ ಹೆಸರೂ ಇತ್ತು. ಶ್ರೀರಾಮುಲು ರಾಜ್ಯ ಮಟ್ಟದ ನಾಯಕ. ನಾನೊಬ್ಬ ಜಿಲ್ಲಾ ಮಟ್ಟದ ನಾಯಕ. ಹೀಗಾಗಿಯೇ ಅವರಿಗೆ ಟಿಕೆಟ್ ಕೊಟ್ಟಿರಬಹುದು. ಬಿಜೆಪಿಯನ್ನು ಗೆಲ್ಲಿಸಲು ದುಡಿಯುತ್ತೇನೆ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT