ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು, ಮತದಾರರಲ್ಲಿ ನೈತಿಕ ಮತದಾನದ ಕುರಿತು ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಯೂ ಆಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ನೈಜ ಮತದಾನದ ಕುರಿತು ಅರಿವು ಮತ್ತು ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಸ್ವೀಪ್ ಸಮಿತಿಯ ಜವಾಬ್ದಾರಿ ಪ್ರಮುಖವಾದದ್ದು ಎಂದು ಅವರು ತಿಳಿಸಿದ್ದಾರೆ.

ಅಧಿಕಾರಿಗಳು ಮತ್ತು ಕಾರ್ಯಹಂಚಿಕೆ:

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರು ಜಿಲ್ಲಾ ಸ್ವೀಪ್ ಸಮಿತಿಗೆ ಸದಸ್ಯ ಕಾರ್ಯದರ್ಶಿಗಳಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಮಿತಿ ಸದಸ್ಯರಾಗಿದ್ದಾರೆ.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯು ಎಲ್ಲಾ ತಾಲ್ಲೂಕಿನ ಎಲ್ಲಾ ಇಲಾಖೆಗಳ ಚಟುವಟಿಕೆಗಳ ಮೇಲ್ವಿಚಾರಣೆ ನಡೆಸಲಿದ್ದಾರೆ. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯು ಜಿಲ್ಲೆಯಲ್ಲಿನ ಎಲ್ಲಾ ಇಲಾಖೆಯ ವಸತಿ ನಿಲಯಗಳಲ್ಲಿ ಸ್ವೀಪ್ ಕಾಯಕ್ರಮಗಳನ್ನು (ಪ್ರಬಂಧಸ್ ಪರ್ಧೆ, ಚರ್ಚೆ, ರಂಗೋಲಿ ಸ್ಪರ್ಧೆ, ಪತ್ರ ಅಭಿಯಾನ, ರಸಪ್ರಶ್ನೆ ಇತ್ಯಾದಿ) ಹಮ್ಮಿಕೊಳ್ಳಲಿದ್ದಾರೆ.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ನಗರ ಪ್ರದೇಶದ ಸ್ಥಳೀಯ ಸಂಸ್ಥೆಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಪದವಿ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಪ್ರತಿನಿತ್ಯ ಕೈಗೊಳ್ಳಬೇಕಾದ ಜವಾಬ್ದಾರಿಯನ್ನು ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಿಗೆ ವಹಿಸಲಾಗಿದೆ.

ಬಿ.ಇಡಿ, ಡಿ.ಇಡ್ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳುವ ಹೊಣೆಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಿಗೆ ನೀಡಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ, ಖಾಸಗಿ ಕಾಲೇಜುಗಳಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು.

ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾಧಿಕಾರಿಗಳು ತಮ್ಮ ಇಲಾಖೆ ಹಾಗೂ ಜಿಲ್ಲೆಯ ನೆಹರು ಯುವ ಕೇಂದ್ರ, ಎಲ್ಲಾ ಯುವಕ ಮಂಡಳಿಗಳೊಂದಿಗೆ ಸಮನ್ವಯ ಮಾಡಿಕೊಂಡು ಸ್ವೀಪ್ ಕಾರ್ಯಕ್ರಮದ ಚಟುವಟಿಕೆ ಕೈಗೊಳ್ಳಬೇಕು ಎಂದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.