ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂಪ್ಲಿ | ಮತದಾನ ಜಾಗೃತಿ: ಸೈಕಲ್ ಜಾಥಾ

Published 3 ಏಪ್ರಿಲ್ 2024, 13:23 IST
Last Updated 3 ಏಪ್ರಿಲ್ 2024, 13:23 IST
ಅಕ್ಷರ ಗಾತ್ರ

ಕಂಪ್ಲಿ: ಜಿಲ್ಲಾ ಚುನಾವಣಾಧಿಕಾರಿ ಕಚೇರಿ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ಬುಧವಾರ ಪಟ್ಟಣದಲ್ಲಿ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.

`ಚುನಾವಣೆ ಪರ್ವ ದೇಶದ ಗರ್ವ' ಎನ್ನುವ ಚುನಾವಣೆ ಆಯೋಗದ ಸಂದೇಶದೊಂದಿಗೆ ಸ್ಥಳೀಯ ಡಾ. ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಸೈಕಲ್ ಜಾಥಾ ನಡುವಲ ಮಸೀದಿ, ಗಂಗಾನಗರ, ಜೋಗಿ ಕಾಲುವೆ, ಚಪ್ಪರದಹಳ್ಳಿ ಸೇರಿದಂತೆ ವಿವಿಧ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಮೂಲಕ ತಹಶೀಲ್ದಾರ್ ಕಚೇರಿ ಆವರಭದಲ್ಲಿ ಮುಕ್ತಾಯಗೊಂಡಿತು.

ಇದೇ ವೇಳೆ ಸಹಿ ಸಂಗ್ರಹಣಾ ಅಭಿಯಾನಕ್ಕೆ ತಹಶೀಲ್ದಾರ್ ಶಿವರಾಜ ಚಾಲನೆ ನೀಡಿ, ಮತದಾನ ಪ್ರತಿಯೊಬ್ಬರ ಹಕ್ಕು ಮತ್ತು ಕರ್ತವ್ಯ. ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗೆ ಸಹಕರಿಸಿ. ಚುನಾವಣೆ ಪ್ರಜಾಪ್ರಭುತ್ವದ ಭದ್ರ ಬುನಾದಿ ಎಂದು ತಿಳಿಸಿದರು.

ಸೈಕಲ್ ಜಾಥಾಕ್ಕೆ ಪುರಸಭೆ ಮುಖ್ಯಾಧಿಕಾರಿ ಜಿ. ರೆಡ್ಡಿ ರಾಯನಗೌಡ ಚಾಲನೆ ನೀಡಿದರು. ತಾಲ್ಲೂಕು ಪಂಚಾಯಿತಿ ಇಒ ಆರ್.ಕೆ. ಶ್ರೀಕುಮಾರ್, ಮನರೇಗಾ ಎಡಿ ಕೆ.ಎಸ್. ಮಲ್ಲನಗೌಡ, ವ್ಯವಸ್ಥಾಪಕಿ ಅಪರಂಜಿ, ಕೃಷಿ ಅಧಿಕಾರಿ ಶ್ರೀಧರ್, ಆರೋಗ್ಯ ಇಲಾಖೆ ಪಿ. ಬಸವರಾಜ, ಇಸಿಒಗಳಾದ ಟಿ.ಎಂ. ಬಸವರಾಜ, ಜಿ. ವೀರೇಶ, ಸಿ.ಆರ್.ಪಿಗಳಾದ ಭುವನೇಶ್ವರ, ರೇಣುಕಾರಾಧ್ಯ, ಪುರಸಭೆ ಸಿಬ್ಬಂದಿ ರಮೇಶ ಬೆಳಂಕರ್, ಪ್ರಕಾಶಬಾಬು, ವಸಂತಮ್ಮ, ಶಿಕ್ಷಕ ನಾಗನಗೌಡ, ಎಲ್ಲ ಗ್ರಾ.ಪಂ ಪಿಡಿಒಗಳು, ತಾಲ್ಲೂಕಿನ ವಿವಿಧ ಇಲಾಖೆ ಅಧಿಕಾರಿಗಳು, ಶಿಕ್ಷಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT