ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ: ಮತ ಎಣಿಕೆ ವ್ಯವಸ್ಥೆ ಪರಿಶೀಲನೆ

ಅಧಿಕಾರಿಗಳಿಗೆ ಸಲಹೆ–ಸೂಚನೆ ನೀಡಿದ ಜಿಲ್ಲಾಧಿಕಾರಿ
Published 24 ಏಪ್ರಿಲ್ 2024, 4:56 IST
Last Updated 24 ಏಪ್ರಿಲ್ 2024, 4:56 IST
ಅಕ್ಷರ ಗಾತ್ರ

ಬಳ್ಳಾರಿ: ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜು ಕಟ್ಟಡಕ್ಕೆ ಚುನಾವಣಾ ವೀಕ್ಷಕರೊಂದಿಗೆ ಮಂಗಳವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್‌ ಮಿಶ್ರಾ, ಡಿ–ಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯಗಳ ಸಿದ್ಧತೆ ಕುರಿತು ವೀಕ್ಷಕರಿಗೆ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ ಚುನಾವಣೆ ಪ್ರಕ್ರಿಯೆಗಳನ್ನು ಅತ್ಯಂತ ಪಾರದರ್ಶಕವಾಗಿ ಕೈಗೊಳ್ಳಲಾಗುತ್ತಿದೆ. ಲೋಕಸಭೆ ಚುನಾವಣೆ ನಿಮಿತ್ತ ಮೇ 7ರಂದು ಮತದಾನ ನಡೆಯಲಿದೆ. ಅದೇ ದಿನ ಸಂಜೆ  8 ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಕಾಲೇಜು ಕಟ್ಟಡದಲ್ಲಿಯೇ ಪ್ರತ್ಯೇಕ ಕೊಠಡಿಗಳಲ್ಲಿ ಸಂಗ್ರಹಿಸಲಾಗುತ್ತದೆ. ಮತಯಂತ್ರಗಳನ್ನು ಅತ್ಯಂತ ಭದ್ರತೆಯಲ್ಲಿ, ನಿಯಮಾನುಸಾರ ಇರಿಸಲಾಗುವುದು’ ಎಂದರು.

‘ಮತಗಳ ಎಣಿಕೆ ಕಾರ್ಯ ಜೂನ್ 4ರಂದು ಇದೇ ಕಾಲೇಜಿನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿ ಅನುಸಾರ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಕಾಲೇಜು ಕಟ್ಟಡದ ನೆಲ ಮಹಡಿ, ಮೊದಲ ಹಾಗೂ ಎರಡನೇ ಮಹಡಿಗಳನ್ನು ಸ್ಟ್ರಾಂಗ್ ರೂಂ ಗಾಗಿ ಹಾಗೂ ಮತ ಎಣಿಕೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುವುದು’ ಎಂದು ವಿವರಿಸಿದರು.

ಚುನಾವಣಾ ವೀಕ್ಷಕ ಚಂದ್ರಶೇಖರ ಸಖಮುರಿ, ಕಾಲೇಜು ಕಟ್ಟಡದ ನೀಲ ನಕ್ಷೆ ಪಡೆದು, ಯಾವ ಯಾವ ಕೊಠಡಿಯಲ್ಲಿ ಯಾವ ಕ್ಷೇತ್ರದ ಮತಯಂತ್ರಗಳನ್ನು ಇರಿಸುವುದು ಹಾಗೂ ಮತ ಎಣಿಕೆ ನಡೆಸಲಾಗುವುದು ಎಂಬ ಕುರಿತು ಪರಿಶೀಲಿಸಿದರು.

ಬಳ್ಳಾರಿ ಲೋಕಸಭಾ ಚುನಾವಣೆಯ ಪೊಲೀಸ್ ವೀಕ್ಷಕ ಧರ್ಮೇಂದ್ರ ಸಿಂಗ್ ಭದೌರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT