ಬಳ್ಳಾರಿ: ಬಳ್ಳಾರಿ ತಾಲ್ಲೂಕಿನ 13, ಸಂಡೂರು ತಾಲ್ಲೂಕಿನ 1 ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಶುಕ್ರವಾರ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಸಂಗ್ರಹಿಸಿದರು.
‘15ನೇ ಹಣಕಾಸು ಆಯೋಗದ ಅನುದಾನದ ಬಳಕೆ ಕುರಿತು ದಾಖಲೆಗಳನ್ನು ಪರಿಶೀಲಿಸಿ, ವಶಕ್ಕೆ ಪಡೆದು ರವಾನಿಸಲು ಕೇಂದ್ರ ಕಚೇರಿಯಿಂದ ವಾರೆಂಟ್ ಬಂದಿತ್ತು. ಅದರಂತೆ ಕ್ರಮವಹಿಸಿದ್ದೇವೆ’ ಎಂದು ಬಳ್ಳಾರಿ ಲೋಕಾಯುಕ್ತ ಎಸ್‌ಪಿ ಸಿದ್ದರಾಜು ‘ಪ್ರಜಾವಾಣಿ’ಗೆ ತಿಳಿಸಿದರು.