ಬಳ್ಳಾರಿ: ‘ಅಹಿಂಸಾವಾದಿ ಮಹಾತ್ಮ ಗಾಂಧೀಜಿ ಅವರ ಜೀವನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಂಸದ ಇ.ತುಕಾರಾಂ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಅವರಣದ ಗಾಂಧಿ ಭವನದಲ್ಲಿ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿಯವರ 155 ನೇ ಜಯಂತ್ಸೋತ್ಸವ (ಗಾಂಧಿ ಭಜನೆ ಹಾಗೂ ಸರ್ವಧರ್ಮ ಪ್ರಾರ್ಥನೆ) ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ವಿಶ್ವದ ಶಾಂತಿ ಪ್ರತಿಪಾದಕ. ಅವರ ವಿಚಾರಗಳನ್ನು ಹೊಸ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ’ ಎಂದರು.

‘ಈಗಾಗಲೇ ಬಳ್ಳಾರಿ ನಗರದ ವಿವಿಧ ರೈಲ್ವೇ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರದಿಂದ ಅನುಮತಿ ಪಡೆದುಕೊಳ್ಳಲಾಗಿದೆ. ಸುಧಾಕ್ರಾಸ್ ಮೇಲ್ಸೇತುವೆ ಕಾಮಗಾರಿ ಮತ್ತು ಎಚ್.ಆರ್.ಗವಿಯಪ್ಪ ವೃತ್ತದ ಮೇಲ್ಸೇತುವೆ ವಿಸ್ತರಣಾ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶೀಘ್ರವೇ ಭೂಮಿಪೂಜೆ ನೆರವೇರಿಸಲಾಗುವುದು. ಎರಡೂ ಜಿಲ್ಲೆಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿಯೇ ಮಾದರಿ ಜಿಲ್ಲೆಗಳನ್ನಾಗಿ ಮಾಡಲಾಗುವುದು’ ಎಂದು ತಿಳಿಸಿದರು.

‘ಪರಿಶಿಷ್ಟ ಪಂಗಡದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ‘ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ’ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು, ಅವುಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ’ ಎಂದು ಅವರು ತಿಳಿಸಿದರು.

‘ಈ ಭಾಗದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸಿದಾಗ ತುರ್ತು ಚಿಕಿತ್ಸೆಗಾಗಿ ಹೊಸಪೇಟೆ ನಗರದಲ್ಲಿ 50 ಹಾಸಿಗೆಯುಳ್ಳ ಆಸ್ಪತ್ರೆಗೆ ಭೂಮಿಪೂಜೆ ಮಾಡಲಾಗಿದೆ’ ಎಂದರು.

ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಮಾತನಾಡಿ, ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಶಾಂತಿ ಮಂತ್ರದಿಂದ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಜಗತ್ತಿನ ಇತರೆ ರಾಷ್ಟ್ರಗಳು ಅಹಿಂಸಾ ಮಾರ್ಗದ ಪ್ರಾಮುಖ್ಯತೆ ತಿಳಿದುಕೊಳ್ಳಬೇಕು‘ ಎಂದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಿದಾನಂದಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಉಪವಿಭಾಗಾಧಿಕಾರಿ ಪ್ರಮೋದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ, ಸಿಬ್ಬಂದಿ ಹನುಮಂತಪ್ಪ, ವಿಜಯ್‌ಕುಮಾರ್.ಹೆಚ್., ಮಲ್ಲೇಶಪ್ಪ.ವೈ, ಹನುಮೇಶ್.ಹೆಚ್., ಅಭಿಷೇಕ್.ಎಚ್., ತಿಪ್ಪೇಸ್ವಾಮಿ.ಟಿ ಸೇರಿದಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.