ಹೊಸಪೇಟೆ(ವಿಜಯನಗರ): ಮ್ಯಾನುವಲ್ ಸ್ಕ್ಯಾವೆಂಜರ್ಸ್ ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ–2013 ಕುರಿತು ಜಾಗೃತಿ ಮೂಡಿಸುವ ಬೀದಿ ನಾಟಕ ಅಭಿಯಾನ ಸೋಮವಾರ ಇಲ್ಲಿನ ನಗರಸಭೆ ಆವರಣದಲ್ಲಿ ನಡೆಯಿತು.

ಸಮಾನತೆ ಟ್ರಸ್ಟ್ ಕಲಾವಿದರು, ಸಫಾಯಿ ಕರ್ಮಚಾರಿಗಳು ಒಳಚರಂಡಿ ಪಿಟ್ ಗಳಲ್ಲಿ ಇಳಿದು ತ್ಯಾಜ್ಯ ಎತ್ತುವುದರಿಂದ ಆಗುವ ಪ್ರಾಣಾಪಾಯ ಕುರಿತು ರೂಪಕ ಪ್ರದರ್ಶಿಸಿದರು.

ಪ್ರದರ್ಶನದ ನಂತರ ಮಾತನಾಡಿದ ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ‘ಮನುಷ್ಯರು ಪಿಟ್ ಒಳಗೆ ಇಳಿದು ಸ್ವಚ್ಚಗೊಳಿಸುವುದು ಅಮಾನುಷ ಪದ್ಧತಿಯಾಗಿದೆ. ಸಫಾಯಿ ಕರ್ಮಚಾರಿಗಳಿಗೆ ಪ್ರಾಣಾಪಾಯ ಉಂಟಾಗುವ ಉದ್ದೇಶದಿಂದಲೇ ಮ್ಯಾನುವಲ್ ಸ್ಕ್ಯಾವೆಂಜರ್ಸ್ ಪದ್ಧತಿ ನಿಷೇಧಿಸಲಾಗಿದೆ’ ಎಂದು ಹೇಳಿದರು.

‘ನಗರವನ್ನು ಸ್ವಚ್ಚಗೊಳಿಸುವ ಎಲ್ಲಾ ಪೌರಕಾರ್ಮಿಕರು ಸಫಾಯಿ ಕರ್ಮಚಾರಿಗಳೇ ಆಗಿದ್ದಾರೆ. ಅವರಿಗೆ ಪುನರ್ವಸತಿ ಕಲ್ಪಿಸುವ ಉದ್ದೇಶದಿಂದ 2013-14ರಲ್ಲಿ ಸಮೀಕ್ಷೆ ನಡೆಸಲಾಗಿತ್ತು. ಆದರೆ, ಶಿಕ್ಷೆಗೆ ಹೆದರಿ ಅನೇಕರು ಮಾಹಿತಿ ನೀಡಿರಲಿಲ್ಲ. ಈ ವರ್ಷ ಮತ್ತೊಮ್ಮೆ ಸಮೀಕ್ಷೆ ಆರಂಭವಾಗಿದೆ. ಆದಷ್ಟು ಬೇಗ ಪೂರ್ಣಗೊಳ್ಳಲಿದೆ. ಎಲ್ಲರೂ ಮಾಹಿತಿ ಕೊಟ್ಟು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಮ್ಯಾನುವಲ್ ಸ್ಕ್ಯಾವೆಂಜರ್ನಿಂದ ಹೇಗೆಲ್ಲ ತೊಂದರೆಗೆ ಒಳಪಡುತ್ತಾರೆ ಎಂಬುದನ್ನು ನಾಟಕದ ಮೂಲಕ ನೈಜವಾಗಿ ಕಲಾವಿದರು ಕಟ್ಟಿಕೊಟ್ಟಿದ್ದಾರೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಗುವುದು. ಒಳಚರಂಡಿ ಸ್ವಚ್ಛತೆಗೆ ಯಾರಾದರೂ ಮನುಷ್ಯರನ್ನು ಬಳಸಿಕೊಂಡರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಸಫಾಯಿ ಕರ್ಮಚಾರಿಗಳು ನಗರಸಭೆಯಲ್ಲಿ ಹೆಸರು ನೋಂದಾಯಿಸಿಕೊಂಡು ಪುನರ್ವಸತಿ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಸಹಾಯಕ ಪರಿಸರ ಎಂಜಿನಿಯರ್ ಆರತಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್ ಮನ್ಸೂರ್ ಅಹಮ್ಮದ್, ಸಮಾನತೆ ಟ್ರಸ್ಟ್ ಅಧ್ಯಕ್ಷ ರಾಮಚಂದ್ರ, ಕಾರ್ಯದರ್ಶಿ ಎನ್.ಹುಲಿಗೆಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.