ಹೊಸಪೇಟೆ(ವಿಜಯನಗರ): ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಉಂಟಾದ ಫಲಿತಾಂಶ ಹಾಗೂ ಶುಲ್ಕದ ಗೊಂದಲ ಸರಿಪಡಿಸುವಂತೆ ಒತ್ತಾಯಿಸಿ ಇಲ್ಲಿನ ವಿಜಯನಗರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
‘ಶ್ರೀಕೃಷ್ಣದೇವರಾಯ ವಿ.ವಿಯು ಕೆಲವು ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಿದ್ದು, ಕೆಲವು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಿಲ್ಲ. ಪರೀಕ್ಷೆಯ ಶುಲ್ಕ ತುಂಬಿದ್ದರೂ ಮತ್ತೆ ಪಾವತಿಸಬೇಕಿದೆ. ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳ ಫಲಿತಾಂಶ ಮತ್ತು ಅಂಕಪಟ್ಟಿ ನೀಡಿಲ್ಲ’ ಎಂದು ಆರೋಪಿಸಿದರು.
‘ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಫಲಿತಾಂಶ ಮತ್ತು ಪರೀಕ್ಷೆ ಶುಲ್ಕದ ಗೊಂದಲ ಪರಿಹರಿಸಿ, ಅನುಕೂಲ ಮಾಡಿಕೊಡಬೇಕು’ ಎಂದು ಕೋರಿದರು.