ಮರಿಯಮ್ಮನಹಳ್ಳಿ: ಪಟ್ಟಣದಲ್ಲಿ ಈಚೆಗೆ ಗ್ರಾಮಸ್ಥರು ಉತ್ತಮ ಮಳೆಬೆಳೆಯಾಗಲೆಂದು ಕೇಲಮ್ಮದೇವಿ ಆಚರಣೆ ನಡೆಸಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರತಿವರ್ಷದಂತೆ ಕೇಲಮ್ಮ ದೇವಿ ಆಚರಣೆ ಆಚರಿಸುತ್ತ ಬಂದಿದ್ದು, ಆಚರಣೆಯ ಅಂಗವಾಗಿ ಗ್ರಾಮ ದೇವತೆ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ದುರ್ಗಾದೇವಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಕಲವಾದ್ಯಗಳ ಸಮೇತ ಮುಖ್ಯ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಭಕ್ತರು ಕೇಲಮ್ಮ ದೇವಿಯನ್ನು ಹೊತ್ತು ತಂದು ಪಟ್ಟಣ ಪಂಚಾಯಿತಿ ಕಾರ್ಯಾಲಯದ ಬಳಿಯ ಹುಲಿಗೆಮ್ಮ ದೇವಸ್ಥಾನದ ಹತ್ತಿರ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಭಕ್ತರು ದೇವಿಗೆ ಹೋಳಿಗೆ ಎಡೆ ಅರ್ಪಿಸಿ ಮಳೆಬೆಳೆ ಚೆನ್ನಾಗಿ ಬರಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಸಂಜೆ ಕೇಲಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ರೈತರು, ಸಾರ್ವಜನಿಕರು ಸಕಲ ವಾದ್ಯಗಳ ಸಮೇತ ಮೆರವಣಿಗೆಯೊಂದಿಗೆ ಕರೆದೊಯ್ದು ರಾಷ್ಟ್ರೀಯ ಹೆದ್ದಾರಿ-50ರ ಬದಿಯ ಗ್ರಾಮದ ಗಡಿಯನ್ನು ದಾಟಿಸಿ ಬಂದರು. ಮೆರವಣಿಗೆಯಲ್ಲಿ ಗ್ರಾಮದ ಹಿರಿಯರು, ಯುವಕರು, ಮಕ್ಕಳು, ಮಹಿಳೆಯರು ಭಾಗವಹಿಸಿದ್ದು ವಿಶೇಷವಾಗಿತ್ತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-25-1419888043

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.