ಮರಿಯಮ್ಮನಹಳ್ಳಿ: ಸ್ಥಳೀಯ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಗುರುವಾರ ಬಂಧಿಸಿ, ಬಂಧಿತನಿಂದ ₹3 ಲಕ್ಷ ಮೌಲ್ಯದ 30ಗ್ರಾಂ ತೂಕದ ವಿವಿಧ ಬಂಗಾರದ ಆಭರಣಗಳನ್ನು ವಶಪಡೆಸಿಕೊಂಡಿದ್ದಾರೆ.

ಸ್ಥಳೀಯ 8ನೇ ವಾರ್ಡ್ನ ನಿವಾಸಿ ವಿ.ಶ್ರೀನಿವಾಸ(33) ಬಂಧಿತ ಆರೋಪಿ.

ಘಟನೆ ವಿವರ: ಸ್ಥಳೀಯ 9ನೇ ವಾರ್ಡಿನ ಲಕ್ಷ್ಮಮ್ಮ ಅವರ ಮನೆಯನ್ನು ಯಾರೋ ಕಳ್ಳರು ಬಾಗಿಲನ್ನು ಮುರಿದು ಮನೆಯಲ್ಲಿದ್ದ ಅಂದಾಜು ₹1.40ಲಕ್ಷ ಮೌಲ್ಯದ ವಿವಿಧ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿದ ಬಗ್ಗೆ ಕಳೆದ ವಾರ ದೂರು ದಾಖಲಿಸಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಸ್ಥಳೀಯ ಪೊಲೀಸರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಹೆಚ್ಚುವರಿ ಎಸ್ಪಿ ಮಂಜುನಾಥ್ ಹಾಗೂ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ವಿಕಾಸ್ ಲಮಾಣಿ ಸಾರಥ್ಯದಲ್ಲಿ ಪಿಎಸ್ಐಗಳಾದ ತಾರಾಬಾಯಿ, ರಾಮಕೃಷ್ಣನಾಯ್ಕ, ಸಿಬ್ಬಂದಿಗಳಾದ ದೇವೇಂದ್ರಪ್ಪ, ಬಸವನಗೌಡ, ನಂದೀಶ್, ಹೂಲೆಪ್ಪ ಅವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಕೇವಲ ಎರಡು ದಿನದಲ್ಲಿ ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-25-161278038

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.