ಬಳ್ಳಾರಿ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ರಾಜ್ಯ ಸರ್ಕಾರದ ಪ್ರಸ್ತಾವವನ್ನು ವಿರೋಧಿಸಿ ನಗರದಲ್ಲಿ ವಾಲ್ಮೀಕಿ ಸಮುದಾಯದಿಂದ ಪ್ರತಿಭಟನೆ ನಡೆಯಿತು.

ನಗರದ ಗಡಿಗಿ ಚೆನ್ನಪ್ಪ (ರಾಯಲ್)ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಪಂಗಡದ ಮೀಸಲಾತಿ ಅಡಿಯಲ್ಲಿ ಗೆದ್ದಿರುವ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು.

ಮೆರವಣಿಗೆಯಲ್ಲಿ ಜಿಲ್ಲಾಡಳಿತ ಕಚೇರಿ ಆವರಣಕ್ಕೆ ತೆರಳಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ‘ಅಖಂಡ ಕರ್ನಾಟಕ ವಾಲ್ಮೀಕಿ ನಾಯಕರ ಒಕ್ಕೂಣ’ದ ಅಧ್ಯಕ್ಷ ಜೋಳದರಾಶಿ ತಿಮ್ಮನಗೌಡ, ‘ರಾಜ್ಯದಲ್ಲಿ ವಾಲ್ಮೀಕಿ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ಪ್ರಬಲ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದರೆ ವಾಲ್ಮೀಕಿ ಸಮುದಾಯವೇ ನಶಿಸಿ ಹೋಗಲಿದೆ’ ಎಂದು ಆಘಾತ ವ್ಯಕ್ತಪಡಿಸಿದರು.

ಜಿಲ್ಲೆಯ ಜನಸಂಖ್ಯೆಯಲ್ಲಿ ವಾಲ್ಮೀಕಿ ಸಮುದಾಯದ ಪಾಲು ಶೇ 18ಕ್ಕಿಂತಲೂ ಅಧಿಕವಾಗಿದ್ದು, ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕು ಮತ್ತು ಲೋಕಸಭಾ ಕ್ಷೇತ್ರಗಳು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿವೆ. ಎಲ್ಲ ಕಡೆಯೂ ವಾಲ್ಮೀಕಿ ಸಮುದಾಯದ ನಾಯಕರೇ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.