ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಮೇಯರ್‌ ಚುನಾವಣೆ: ಕಾಂಗ್ರೆಸ್‌ನಿಂದ ವೀಕ್ಷಕರ ನೇಮಕ

Published 18 ಜೂನ್ 2024, 16:27 IST
Last Updated 18 ಜೂನ್ 2024, 16:27 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್‌, ಉಪ ಮೇಯರ್‌ ಚುನಾವಣೆ ಇದೇ 21ರಂದು ನಡೆಯುತ್ತಿದ್ದು, ಚುನಾವಣಾ ಕಾರ್ಯದ ಮೇಲುಸ್ತುವಾರಿಗಾಗಿ ಕಾಂಗ್ರೆಸ್‌ನಿಂದ ಇಬ್ಬರು ವೀಕ್ಷಕರನ್ನು ಮಂಗಳವಾರ ನೇಮಿಸಲಾಗಿದೆ. 

ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ. ನಾರಾಯಣಸ್ವಾಮಿ, ಕೆಪಿಸಿಸಿ ಉಪಾಧ್ಯಕ್ಷ ಸೂರಜ್‌ ಎಂ.ಎನ್‌ ಹೆಗ್ಗಡೆ ಚುನಾವಣಾ ವೀಕ್ಷಕರಾಗಿ ನಿಯೋಜನೆಗೊಂಡಿದ್ಧಾರೆ. 

ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಸುಲಭವಾಗಿ ಆಯ್ಕೆಯಾಗಲು ಹಾಗೂ ಪಾಲಿಕೆ ಸದಸ್ಯರಿಗೆ ಅಗತ್ಯ ಮಾರ್ಗದರ್ಶನ ನೀಡುವ ಸಲುವಾಗಿ ವೀಕ್ಷಕರನ್ನು ನೇಮಿಸಲಾಗಿದೆ.

ನಗರಕ್ಕೆ ಭೇಟಿ ನೀಡಲಿರುವ ವೀಕ್ಷಕರು ಉಸ್ತುವಾರಿ ಕಾರ್ಯಾಧ್ಯಕ್ಷ, ಉಸ್ತುವಾರಿ ಸಚಿವ, ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಸಂಸದ, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಬಳ್ಳಾರಿ ಮಹಾನಗರಪಾಲಿಕೆ ಸದಸ್ಯರು ಹಾಗೂ ಇತರೆ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT