ಹೊಸಪೇಟೆ: ‘ನಾನು ಈ ಇಲಾಖೆಯಲ್ಲಿ ಎಷ್ಟು ದಿನ ಇರುತ್ತೇನೋ, ಇಲ್ಲವೋ ಗೊತ್ತಿಲ್ಲ ಎಂದು ಇತ್ತೀಚೆಗೆ ವಿಜಯನಗರ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದೆ. ಆದರೆ, ಈ ಸರ್ಕಾರ ಎಷ್ಟು ದಿನ ಇರುತ್ತೋ, ಹೋಗುತ್ತೋ ಗೊತ್ತಿಲ್ಲ ಎಂಬರ್ಥದಲ್ಲಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿದೆ’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಭಾನುವಾರ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

‘ನಮ್ಮ ಸರ್ಕಾರ ಅವಧಿ ಪೂರ್ಣಗೊಳಿಸುತ್ತದೆ. ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ನನ್ನ ಇಲಾಖೆಗೆ ಸಂಬಂಧಿಸಿದ ಮೊದಲ ಕಾರ್ಯಕ್ರಮ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದರಿಂದ ಬೆಂಗಳೂರಿನ ಕಾರ್ಯಕ್ರಮದ ಬದಲು ಇಲ್ಲಿ ಪಾಲ್ಗೊಂಡೆ. ಸರ್ಕಾರಗಳು ಬರುತ್ತವೆ ಹೋಗುತ್ತವೆ. ಆದರೆ, ಕ್ಷೇತ್ರ ಮತ್ತು ಕ್ಷೇತ್ರದ ಜನರ ಹಿತಾಸಕ್ತಿ ಗೆ ಜನಪ್ರತಿನಿಧಿಗಳಾದ ನಾವು ಮೊದಲ ಆದ್ಯತೆ ಕೊಡಬೇಕು ಎನ್ನುವ ಅರ್ಥದಲ್ಲಿ ಹೇಳಿದ್ದೆ’ ಎಂದು ತಿಳಿಸಿದ್ದಾರೆ.

ತಾಲ್ಲೂಕಿನ ಕಮಲಾಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹದಲ್ಲಿ ಸಚಿವರು ಮಾತನಾಡಿ, ‘ಈ ಸರ್ಕಾರ ಯಾವಾಗ ಹೋಗುತ್ತೋ, ಇರುತ್ತೋ ಗೊತ್ತಿಲ್ಲ’ ಎಂದು ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.