ಕೂಡ್ಲಿಗಿ: ‘ಮಳೆಗಾಲ ಆರಂಭವಾಗಿದ್ದು, ರಸ್ತೆಗಳಲ್ಲಿನ ತಗ್ಗು ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಿ’ ಎಂದು ಲೋಕೋಪಯೋಗಿ ಇಲಾಖೆಯ ಎಂಜನಿಯರ್ಗೆ ಶಾಸಕ ಡಾ. ಶ್ರೀನಿವಾಸ ಎನ್.ಟಿ. ನಿರ್ದೇಶನ ನೀಡಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ಇಲಾಖೆಯ ಎಂಜನಿಯರ್ಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಕೋಟ್ಯಾಂತರ ರೂಪಾಯಿ ಅನುದಾನ ತರಲಾಗಿದ್ದು, ಉತ್ತಮ ರಸ್ತೆಗಳನ್ನು ನಿರ್ಮಿಸಲಾಗಿದೆ. ಆದರೆ ಕೆಲವು ಕಡೆ ರಸ್ತೆಗಳಲ್ಲಿ ತಗ್ಗು, ಗುಂಡಿಗಳು ಬಿದ್ದಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ತಕ್ಷಣ ಅವುಗಳನ್ನು ಸರಿಪಡಿಸಿ. ರಸ್ತೆಯ ಅಕ್ಕ ಪಕ್ಕದಲ್ಲಿ ಬೆಳೆದಿರುವ ಗಿಡಕಂಟೆಗಳನ್ನು ಕತ್ತರಿಸಿ. ಅದಕ್ಕೆ ಬೇಕಾದ ಅನುದಾನವನ್ನು ನೀಡಲಾಗುವುದು. ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಮಾಡುವಾಗ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಹಕ ಎಂಜನಿಯರ್ ದೇವದಾಸ್, ಸಹಯಕ ಕಾರ್ಯನಿರ್ವಹಕ ಎಂಜನಿಯರ್ ಕೆ. ನಾಗನಗೌಡ ಹಾಗೂ ಸಹಾಯಕ ಎಂಜನಿಯರ್, ಕಿರಿಯ ಎಂಜನಿಯರ್ಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.