ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗಳನ್ನು ಕೊಂದು ತಾಯಿ ಆತ್ಮಹತ್ಯೆ; ಮಗನ ಸ್ಥಿತಿ ಗಂಭೀರ

Published 14 ಅಕ್ಟೋಬರ್ 2023, 19:36 IST
Last Updated 14 ಅಕ್ಟೋಬರ್ 2023, 19:36 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ಹುಲಿಕಟ್ಟೆ ಗ್ರಾಮದಲ್ಲಿ ಶನಿವಾರ ಮಗಳನ್ನು ಕೊಂದು, ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿಯ ಹೊಡೆತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಮಗನನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಮಾಬಾನು (19) ಕೊಲೆಯಾದವರು. ಬೇಗಂ (56) ಆತ್ಮಹತ್ಯೆ ಮಾಡಿಕೊಂಡವರು. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಅಮಾನುಲ್ಲಾ (16) ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವಿವರ: ಮನೆಯಲ್ಲಿ ಬೇಗಂ ಮತ್ತು ಶಮಾಬಾನು ಮಾತ್ರ ಇರುತ್ತಿದ್ದರು. ಹಾರಕನಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಅಮಾನುಲ್ಲಾ ದಸರಾ ರಜೆಗೆಂದು ಮನೆಗೆ ಬಂದಿದ್ದ. ಶುಕ್ರವಾರ ರಾತ್ರಿ ಮಲಗಿದ್ದ ವೇಳೆ ತಾಯಿ ಕಟ್ಟಿಗೆಯಿಂದ ಇಬ್ಬರ ಮಕ್ಕಳ ತಲೆಗೆ ಬಲವಾಗಿ ಹೊಡೆದ ಪರಿಣಾಮ ಮಗಳು ಮೃತಪಟ್ಟರೆ, ಮಗ ಪ್ರಜ್ಞೆ ಕಳೆದುಕೊಂಡ. ಘಟನೆಗೆ ನಿಖರ ಕಾರಣ ಗೊತ್ತಾಗಿಲ್ಲ’ ಎಂದು ಹರಪನಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್., ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ನಾಗರಾಜ್ ಎಂ.ಕಮ್ಮಾರ, ಪಿಎಸ್ಐ ಶಂಭುಲಿಂಗ ಹಿರೇಮಠ ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಹರಪನಹಳ್ಳಿ ತಾಲ್ಲೂಕು ಹುಲಿಕಟ್ಟೆ ಗ್ರಾಮಕ್ಕೆ ಬೇಟಿ ನೀಡಿದ್ದ ವಿಜಯನಗರ ಜಿಲ್ಲೆ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚಿಸಿದರು.
ಹರಪನಹಳ್ಳಿ ತಾಲ್ಲೂಕು ಹುಲಿಕಟ್ಟೆ ಗ್ರಾಮಕ್ಕೆ ಬೇಟಿ ನೀಡಿದ್ದ ವಿಜಯನಗರ ಜಿಲ್ಲೆ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT