ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಿಮೆ ರಕ್ತದೊತ್ತಡ: ಮಗುವಿಗೆ ಜನ್ಮ ನೀಡಿದ್ದ ತಾಯಿ ಸಾವು

Published 2 ಜನವರಿ 2024, 15:41 IST
Last Updated 2 ಜನವರಿ 2024, 15:41 IST
ಅಕ್ಷರ ಗಾತ್ರ

ಹೂವಿನಹಡಗಲಿ: 10 ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಕಡಿಮೆ ರಕ್ತದೊತ್ತಡದಿಂದ ಸೋಮವಾರ ರಾತ್ರಿ ಮೃತಪಟ್ಟಿರುವ ಘಟನೆ ಜರುಗಿದೆ.

ತಾಲ್ಲೂಕಿನ ಹುಗಲೂರು ಗ್ರಾಮದ ತಿರುಕನಗೌಡ ಎಂಬುವವರ ಪತ್ನಿ ಐಶ್ವರ್ಯಾ (24) ಮೃತರು. 10 ದಿನಗಳ ಹಿಂದೆ ದಾವಣಗೆರೆ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿ ಸ್ವಗ್ರಾಮಕ್ಕೆ ಕರೆತರಲಾಗಿತ್ತು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸೋಮವಾರ ಮತ್ತೆ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಿದೇ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.

ಈ ದಂಪತಿ ಕಳೆದ ವರ್ಷ ಪ್ರೀತಿಸಿ ಮದುವೆಯಾಗಿದ್ದರು. ಹಸುಗೂಸು ಬಿಟ್ಟು ಬಾಣಂತಿ ಸಾವಿಗೀಡಾಗಿದ್ದರಿಂದ ಕುಟುಂಬದ ಸದಸ್ಯರು ರೋಧಿಸಿದರು. ಗ್ರಾಮದ ಜನರು ಮಮ್ಮಲ ಮರುಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT