ಹೊಸಪೇಟೆ(ವಿಜಯನಗರ): ವ್ಯಕ್ತಿಯೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಚಿತ್ತವಾಡಗೆಪ್ಪ ದೇವಸ್ಥಾನದ ಬಳಿ ರಾಜು (45) ಎಂಬುವರನ್ನು ಶನಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮೃತ ವ್ಯಕ್ತಿಯ ಪತ್ನಿ ಅನಿತಾ ನೀಡಿದ ದೂರಿನ ಮೇಲೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸ್ಥಳಕ್ಕೆ ಎಸ್ಪಿ ಸೈದುಲು ಅಡಾವತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮೀಣ ಠಾಣೆ ಸಿಪಿಐ ಶ್ರೀನಿವಾಸ ಮೇಟಿ ನೇತೃತ್ವದ ತಂಡವನ್ನು ಆರೋಪಿಗಳ ಪತ್ತೆಗೆ ರಚಿಸಲಾಗಿದೆ ಎಂದು ಡಿವೈಎಸ್ಪಿ ವಿಶ್ವನಾಥ್ ರಾವ ಕುಲಕರ್ಣಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.