ಹೊಸಪೇಟೆ: ‘ವಿಶ್ವವಿದ್ಯಾಲಯಗಳ ಭೌತಿಕ ಮತ್ತು ಬೌದ್ಧಿಕ ಗುಣಮಟ್ಟ ಪರೀಕ್ಷಿಸಿ, ಶಿಕ್ಷಣದಲ್ಲಿ ಗುಣಮಟ್ಟ ಸುಧಾರಣೆಗೆ ಶ್ರಮಿಸುತ್ತಿರುವ ಸಂಸ್ಥೆ ರಾಷ್ಟ್ರೀಯ ಮೌಲೀಕರಣ ಮತ್ತು ಮಾನ್ಯತಾ ಪರಿಷತ್ತು (ನ್ಯಾಕ್)’ ಎಂದು ನ್ಯಾಕ್ ಸಲಹೆಗಾರ ಗಣೇಶ್ ಹೆಗಡೆ ತಿಳಿಸಿದರು.

ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನ್ಯಾಕ್ ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

‘ವಿಶ್ವವಿದ್ಯಾಲಯಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳುವ ಉದ್ದೇಶದಿಂದ 1994ರಲ್ಲಿ ನ್ಯಾಕ್ ಆರಂಭಿಸಲಾಗಿದೆ. ಪ್ರತಿವರ್ಷ ವಿಶ್ವವಿದ್ಯಾಲಯದ ಪ್ರಗತಿಯ ಯೋಜನೆ ರೂಪಿಸಲು ಆಂತರಿಕ ಗುಣಮಟ್ಟ ಭರವಸೆ ಕೋಶ ಆರಂಭಿಸಲಾಗಿದೆ’ ಎಂದರು.

ಕುಲಪತಿ ಪ್ರೊ.ಸ.ಚಿ. ರಮೇಶ ಮಾತನಾಡಿ, ‘ವಿಶ್ವವಿದ್ಯಾಲಯಗಳು ಭೌತಿಕವಾಗಿ ಮತ್ತು ಬೌದ್ಧಿಕವಾಗಿ ಸಾಕಷ್ಟು ಪ್ರಗತಿ ಸಾಧಿಸಿದರೂ ಅದನ್ನು ಸರಿಯಾಗಿ ದಾಖಲಿಸಿ ನ್ಯಾಕ್ ಸಂಸ್ಥೆಯ ಮುಂದೆ ಪ್ರಸ್ತುತಪಡಿಸದಿದ್ದರೆ ವಿಶ್ವವಿದ್ಯಾಲಯಗಳು ತಮ್ಮ ಗುಣಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ಮತ್ತು ಉತ್ತಮಪಡಿಸಿಕೊಳ್ಳುವಲ್ಲಿ ವಿಫಲವಾಗುವ ಸಾಧ್ಯತೆ ಹೆಚ್ಚು’ ಎಂದು ಹೇಳಿದರು.

‘ಕನ್ನಡ ವಿಶ್ವವಿದ್ಯಾಲಯದ ಎಲ್ಲಾ ಅಧ್ಯಾಪಕರು ತಮ್ಮ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ. ಆದರೆ, ಇನ್ನು ಮುಂದೆ ಅಧ್ಯಾಪಕರು ತಮ್ಮ ವಿಭಾಗದ ಎಲ್ಲಾ ಕಾರ್ಯಕ್ರಮಗಳನ್ನು ಮತ್ತು ಶೈಕ್ಷಣಿಕ ಸಾಧನೆಯನ್ನು ದಾಖಲೀಕರಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ನ್ಯಾಕ್ ಸಲಹೆಗಾರ ಪೊನ್ನಮುಡಿ ರಾಜ್, ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಎ. ಮೋಹನ ಕುಂಟಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.