ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಸದಸ್ಯ ನಾಸಿರ್‌ ಹುಸೇನ್‌ಗೆ ಬಳ್ಳಾರಿಯಲ್ಲಿ ಭವ್ಯ ಸ್ವಾಗತ

Published 14 ಏಪ್ರಿಲ್ 2024, 15:00 IST
Last Updated 14 ಏಪ್ರಿಲ್ 2024, 15:00 IST
ಅಕ್ಷರ ಗಾತ್ರ

ಬಳ್ಳಾರಿ: ರಾಜ್ಯಸಭಾ ಸದಸ್ಯರಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿಗೆ ಆಗಮಿಸಿರುವ ನಾಸಿರ್‌ ಹುಸೇನ್‌ ಅವರಿಗೆ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಭಾನುವಾರ ಭವ್ಯ ಸಾಗತ ನೀಡಿದರು.

ಅನಂತಪುರ ಮಾರ್ಗವಾಗಿ ಭಾನುವಾರ ಸಂಜೆ ನಗರದ ಸಂಗಮ್‌ ವೃತ್ತಕ್ಕೆ ಆಗಮಿಸಿದ ನಾಸಿರ್‌ ಹುಸೇನ್‌ ಅವರನ್ನು ನೂರಾರು ಕಾರ್ಯಕರ್ತರು ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸ್ವಾಗತಿಸಿದರು. ಈ ವೇಳೆ ಬಳ್ಳಾರಿ ಉಸ್ತುವಾರಿ ಸಚಿವ ಬಿ.ನಾಗೇಂದ್ರ, ಶಾಸಕ ಭರತ್‌ ರೆಡ್ಡಿ ‌ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

ನಂತರ ತೆರೆದ ವಾಹನದಲ್ಲಿ ನಾಸಿರ್‌ ಹುಸೇನ್‌ ಅವರನ್ನು ಮೆರವಣಿಗೆ ಮೂಲಕ ಕರೆದೊಯ್ಯಲಾಯಿತು. ಸಂಗಮ್‌ ವೃತ್ತದಿಂದ ಗಡಿಗಿ ಚನ್ನಪ್ಪ ವೃತ್ತದ ಮಾರ್ಗವಾಗಿ ಮೆರವಣಿಗೆ ನಾಸಿರ್‌ ನಿವಾಸದತ್ತ ತೆರಳಿತು. ಅವರ ಹಿಂದೆ ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಬೈಕ್‌ಗಳಲ್ಲಿ ತೆರಳಿದರು.

ಪಾಕ್‌ ಪರ ಘೋಷಣೆ ವಿವಾದ: ನಾಸಿರ್‌ ಹುಸೇನ್‌ ಅವರು ರಾಜ್ಯಸಭೆಗೆ ಆಯ್ಕೆಯಾದ ದಿನ ವಿಧಾನಸೌಧದಲ್ಲಿ ಅವರ ಬೆಂಬಲಿಗನೊಬ್ಬ ಪಾಕಿಸ್ತಾನ್‌ ಪರ ಘೋಷಣೆ ಕೂಗಿದ್ದ ಎನ್ನಲಾಗಿದ್ದು, ಅದು ವಿವಾದಕ್ಕೆ ಕಾರಣವಾಗಿತ್ತು. ಘಟನೆಯ ಬಗ್ಗೆ ತನಿಖೆಯೂ ನಡೆಯುತ್ತಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT