ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ | ಕಸಬರಕೆಯಿಂದ ಸ್ವಚ್ಛತಾ ಕಾರ್ಯಕೈಗೊಂಡ ನ್ಯಾಯಾಧೀಶರು

ರಾಷ್ಟ್ರೀಯ ಸ್ವಚ್ಛತಾ ದಿನ ಆಚರಣೆ
Last Updated 30 ಜನವರಿ 2023, 11:00 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ತಾಲ್ಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದಿಂದ ರಾಷ್ಟ್ರೀಯ ಸ್ವಚ್ಛತಾ ದಿನ ಸೋಮವಾರ ನಗರದ ನ್ಯಾಯಾಲಯದ ಆವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ನ್ಯಾಯಾಧೀಶರು, ವಕೀಲರು ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮಾನ್ ಎ. ನಂದಗಡಿ ಕಾರ್ಯಕ್ರಮ ಉದ್ಘಾಟಿಸಿ, ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಕಲುಷಿತ ವಾತಾವರಣದಿಂದ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.

ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹೇಮಲತಾ ಬಿ. ಹುಲ್ಲೂರ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಮೇಶ್ ಬಾಬು ಬಿ.ಎನ್., ಪ್ರಧಾನ ಸಿವಿಲ್‌ ನ್ಯಾಯಾಧೀಶ ಕಿಶನ್ ಬಿ.ಮಾಡಲಗಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ತೃಪ್ತಿ ಧರಣಿ, 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂಜೀವಕುಮಾರ ಜಿ., 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶೆ ಚೈತ್ರ ಜೆ., ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಬಸವರಾಜ, ಪ್ರಧಾನ ಕಾರ್ಯದರ್ಶಿ ಎ.ಕರುಣಾನಿಧಿ, ಆಡಳಿತ ಸಹಾಯಕ ಎಸ್.ಬಿ. ಕಮತಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT