ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಸೀಕೆರೆ: ಶಿಕ್ಷಕಿ ಅನುಸೂಯಮ್ಮ ಅವರಿಗೆ ರಾಷ್ಟ್ರೀಯ ಶಿಕ್ಷಣ ರತ್ನ ಪ್ರಶಸ್ತಿ

Published 11 ಫೆಬ್ರುವರಿ 2024, 16:26 IST
Last Updated 11 ಫೆಬ್ರುವರಿ 2024, 16:26 IST
ಅಕ್ಷರ ಗಾತ್ರ

ಅರಸೀಕೆರೆ: ಗ್ರಾಮದ ಶಾಂತಪ್ರಕಾಶ ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ಅನುಸೂಯಮ್ಮ ಆರ್ ಅವರಿಗೆ ರಾಷ್ಟ್ರೀಯ ಶಿಕ್ಷಣ ರತ್ನ ಪ್ರಶಸ್ತಿ ಲಭಿಸಿದೆ.

ಚಿರಾಯು ಅಸೋಸಿಯೇಷನ್ ಕರ್ನಾಟಕ ಹಾಗೂ ಜನ ಸೇವಾ ಪೌಂಡೇಶನ್ ವತಿಯಿಂದ 75 ನೇ ಗಣ ರಾಜ್ಯೋತ್ಸವ ಅಂಗವಾಗಿ ಫೆ.11 ರಂದು ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ

ಕೊಟ್ಟೂರು: ಪಟ್ಟಣದ ಬಸವೇಶ್ವರ ನಗರದ ಶ್ರೀ ಈಶ್ವರ ದೇವಸ್ಥಾನದಲ್ಲಿ ವೀರಭದ್ರೇಶ್ವರ ಸ್ವಾಮಿ, ಆಂಜನೇಯಸ್ವಾಮಿ ಹಾಗೂ ನವಗ್ರಹ ವಿಗ್ರಹಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಇದೇ 12 ಹಾಗೂ 13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬಸವೇಶ್ವರ ನಗರ ಕ್ರಿಯಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಉಜ್ಜಯಿನಿ ಪೀಠಾಧೀಶರಾದ ಸಿದ್ಧಲಿಂಗಶಿವಾಚಾರ್ಯರು ಹಾಗೂ ವಿವಿಧ ಮಠಾಧೀಶರುಗಳು ಭಾಗವಹಿಸಲಿದ್ದು ಹೋಮ ಹವನ ಹಾಗೂ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT