ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಸಮಾಜದ ಕಣ್ಣು: ಗುಡ್ಲಾನೂರ್

Published 24 ಜನವರಿ 2024, 13:08 IST
Last Updated 24 ಜನವರಿ 2024, 13:08 IST
ಅಕ್ಷರ ಗಾತ್ರ

ಕೊಟ್ಟೂರು: ಕುಟುಂಬ ಮತ್ತು ಸಮಾಜ ವ್ಯವಸ್ಥಿತವಾಗಿ ಸಾಗಲು ಹೆಣ್ಣಿನ ಪಾತ್ರ ಬಹುಮುಖ್ಯವಾಗಿದೆ ಎಂದು ಸಾರ್ವಜನಿಕ ಗ್ರಂಥಾಲಯದ ಗ್ರಂಥಾಲಯಾಧಿಕಾರಿ ಮಲ್ಲಪ್ಪ ಗುಡ್ಲಾನೂರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಬಾಲಕಿಯರಿಗೆ ಎಳೆಯ ಪ್ರಾಯದಲ್ಲಿ ಸೂಕ್ತವಾದ ಶಿಕ್ಷಣ ಕೊಡಿಸಿದರೆ ಮುಂದೆ ಅವರ ಜೀವನ ಸುಗಮವಾಗಿ ಸಾಗಿ ಆರ್ಥಿಕವಾಗಿ, ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.

ಎಲ್ಲಾ ರಂಗಗಳಲ್ಲೂ ಹೆಣ್ಣು ಮಕ್ಕಳು ಇಂದು ಮುಂಚೂಣಿಯಲ್ಲಿದ್ದು, ಕುಟುಂಬ ಹಾಗೂ ಹೊರಗೂ ಸಮರ್ಥವಾಗಿ ಕೆಲಸಗಳನ್ನು ನಿರ್ವಹಿಸುವ ಮೂಲಕ ಜಾಣ್ಮೆಯನ್ನು ತೋರುತ್ತಿದ್ದಾರೆ. ಹಾಗಾಗಿ ಅವರನ್ನು ಗೌರವಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಷ್ಠಾನಗೊಳಿಸುತ್ತಿರುವುದು ಶ್ಲಾಘನೀಯ ಎಂದರು.

ಶಿಕ್ಷಕಿ ಅಕ್ಕಮಹಾದೇವಿ ಮಾತನಾಡಿದರು, ಹನುಮಕ್ಕ, ರತ್ನಮ್ಮ ಹಾಗೂ ಪಾಲಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT