ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೋದಯ ಪರೀಕ್ಷೆ: 307 ವಿದ್ಯಾರ್ಥಿಗಳು ಹಾಜರು

Published 20 ಜನವರಿ 2024, 16:26 IST
Last Updated 20 ಜನವರಿ 2024, 16:26 IST
ಅಕ್ಷರ ಗಾತ್ರ

ಕಂಪ್ಲಿ: ಸ್ಥಳೀಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಪ್ರಸಕ್ತ ಸಾಲಿನ ಜವಾಹರ್ ನವೋದಯ ಪ್ರವೇಶ ಪರೀಕ್ಷೆಗೆ 307 ವಿದ್ಯಾರ್ಥಿಗಳು ಹಾಜರಾಗಿದ್ದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ಶ್ರೀಕುಮಾರ್ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

‘343 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 36 ವಿದ್ಯಾರ್ಥಿಗಳು ಗೈರಾಗಿದ್ದಾರೆ’ ಎಂದು ಪರೀಕ್ಷೆ ಮುಖ್ಯ ಅಧೀಕ್ಷಕ ಬಸವರಾಜ ಪಾಟೀಲ್ ತಿಳಿಸಿದ್ದಾರೆ. ಕೇಂದ್ರದ ವೀಕ್ಷಕ(ಸಿಎಲ್‍ಒ) ಚಂದನ್ ಸೇರಿದಂತೆ 17 ಮಂದಿ ಪರೀಕ್ಷೆ ಮೇಲ್ವಿಚಾರಕರಾಗಿ ಕಾರ್ಯ ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT