ಬಳ್ಳಾರಿ: ‘ಒಳ ಮೀಸಲಾತಿ ಕುರಿತು ಸರ್ಕಾರ ಕೈಗೊಂಡಿರುವ ನಿರ್ಧಾರದಿಂದ ಬಂಜಾರ ಸಮಾಜಕ್ಕೆ ಅನ್ಯಾಯವಾಗಿಲ್ಲ’ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಎಚ್. ಹನುಮಂತಪ್ಪ ಹೇಳಿದರು.
‘ಒಳ ಮೀಸಲಾತಿ ಕುರಿತು ಸರ್ಕಾರ ತಗೆದುಕೊಂಡಿರುವ ನಿರ್ಧಾರ ಸ್ವಾಗತಾರ್ಹವಾಗಿದ್ದು, ಇಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಿಲ್ಲ. ಬಂಜಾರ ಸಮುದಾಯಕ್ಕೆ ಶೇ 4.5ರಷ್ಟು ಮೀಸಲಾತಿ ನೀಡಿದೆ’ ಎಂದು ಹನುಮಂತಪ್ಪ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಪ್ರತಿಪಾದಿಸಿದರು.
‘ಒಳ ಮೀಸಲಾತಿಗಾಗಿ ಮೂವತ್ತು ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಕ್ಕಿದೆ. ಬಂಜಾರ ಸಮಾಜ ತಪ್ಪುಗ್ರಹಿಕೆಯಿಂದ ಅನ್ಯಾಯವಾಗಿದೆ ಎಂದು ಪ್ರತಿಭಟಿಸುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ರಾಜ್ಯ ಸರ್ಕಾರ ಎಲ್ಲರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಒಳ ಮೀಸಲಾತಿ ನೀಡುವ ನಿರ್ಧಾರ ಕೈಗೊಂಡಿದೆ’ ಎಂದರು. ಸೋಮಶೇಖರ್, ರಾಜೇಶ್, ಹುಲುಗಪ್ಪ, ರಾಮಣ್ಣ ಪತ್ರಿಕಾ ಗೋಷ್ಠಿಯಲ್ಲಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.