ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡ್ಲಿಗಿ | ಎರಡು ಬಾಲ್ಯವಿವಾಹ ತಡೆದ ಅಧಿಕಾರಿಗಳು

Published 7 ಮೇ 2023, 7:21 IST
Last Updated 7 ಮೇ 2023, 7:21 IST
ಅಕ್ಷರ ಗಾತ್ರ

ಕೂಡ್ಲಿಗಿ/ವಿಜಯನಗರ ಜಿಲ್ಲೆ: ತಾಲ್ಲೂಕಿನ ಪಾಲಯ್ಯನಕೋಟೆಯಲ್ಲಿ ಭಾನುವಾರ ನಡೆಯಬೇಕಾಗಿದ್ದ ಎರಡು ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ.

ಪಾಲಯ್ಯನಕೋಟೆ ಗ್ರಾಮದಲ್ಲಿ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು ನಿರ್ಧರಿಸಿದ್ದರು. ಈ ವಿಷಯ ತಿಳಿದಾಗ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ. ಸದಾಶಿವ ಪ್ರಭು ನೇತೃತ್ವದ ಅಧಿಕಾರಿಗಳ ತಂಡ ಗ್ರಾಮದ ಮದುವೆ ಮನೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ವೇಳೆ ಒಂದೇ ಕುಟುಂಬದ ಇಬ್ಬರು ಅಪ್ರಾಪ್ತರಿಗೆ ಮದುವೆ ಮಾಡಲು ಮುಂದಾಗಿರುವುದು ಖಚಿತವಾಗಿದೆ. ನಂತರ ಬಾಲ್ಯ ವಿವಾಹದ ದುಷ್ಪರಿಣಾಮ ಮತ್ತು ಶಿಕ್ಷೆಯ ಅರಿವನ್ನು ಪೋಷಕರಲ್ಲಿ ಮೂಡಿಸಿ, ಯಾವುದೇ ಕಾರಣಕ್ಕೂ ಮದುವೆ ಮಾಡಬಾರದು ಎಂದು ತಿಳಿ ಹೇಳಿ, ಅವರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡಿದ್ದಾರೆ.

ಶಿಶು ಅಭಿವೃದ್ಧಿ ಅಧಿಕಾರಿ ನಾಗನಗೌಡ, ತಾಲ್ಲೂಕು ಆರೋಗ್ಯಧಿಕಾರಿ ಡಾ. ಎಸ್.ಪಿ. ಪ್ರದೀಪ್, ಪೊಲೀಸ್ ಸಿಬ್ಬಂದಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT