ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Published 14 ಮಾರ್ಚ್ 2024, 14:55 IST
Last Updated 14 ಮಾರ್ಚ್ 2024, 14:55 IST
ಅಕ್ಷರ ಗಾತ್ರ

ಬಳ್ಳಾರಿ: ಸಂಸದ ಅನಂತಕುಮಾರ ಹೆಗಡೆ ಅವರು ದಲಿತ ವಿರೋಧಿ, ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಸಮಾಜದಲ್ಲಿ ಶಾಂತಿ ಕದಡು ಕೆಲಸ ಮಾಡುತ್ತಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. 

ಬಳ್ಳಾರಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಸಾಗರ ಬಣ) ರಾಜ್ಯ ಸಂಘಟನಾ ಸಂಚಾಲಕ ಎ. ಮಾನಯ್ಯ ’ಅನಂತಕುಮಾರ್‌ ಹೆಗಡೆ ಸಂವಿಧಾನದ ವಿರುದ್ಧ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇಂಥ ಹೇಳಿಕೆ ನೀಡುವುದನ್ನು ಅವರು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು. 

‘ಅನಂತಕುಮಾರ್ ಹೆಗಡೆ ಅವರ ವಿರುದ್ದ ಬಿಜೆಪಿ ವರಿಷ್ಠರು ಕ್ರಮಗೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿಯೇ ಅನಂತಕುಮಾರ್ ಹೆಗಡೆ ಮೂಲಕ ಇಂಥ ಹೇಳಿಕೆಗಳನ್ನು ಕೊಡುಸುತ್ತಿದೆ ಎಂದಾಗುತ್ತದೆ‘ ಎಂದು ಸಂಘಟನೆ ಮುಖಂಡರು ಬಿಜೆಪಿ ವಿರುದ್ಧ ಆಕ್ರೋಶ ವ್ತಕ್ತಪಡಿಸಿದರು. 

ಮುಖಂಡರಾದ ದುರುಗುಪ್ಪ ತಳವಾರ್, ಶಂಕರ್, ಭೀಮಾ ಶಂಕರ್, ಬಿಸಲಹಳ್ಳಿ ರಾಮೇಶ್, ಗೋನಾಳ್ ಅಂಜಿನಪ್ಪ, ನಾಗೇನಹಳ್ಳಿ ಮಲ್ಲಪ್ಪ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT