ಭಾನುವಾರ, ಏಪ್ರಿಲ್ 2, 2023
33 °C

ಹಂಪಿ ಉತ್ಸವದಲ್ಲಿ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆತ: ಇಬ್ಬರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಹಂಪಿ (ಹೊಸಪೇಟೆ): ಹಂಪಿ ಉತ್ಸವದ ಸಮಾರೋಪ ಸಮಾರಂಭದ ಅಂಗವಾಗಿ ಭಾನುವಾರ ತಡರಾತ್ರಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಬಹುಭಾಷಾ ಗಾಯಕ ಕೈಲಾಶ್ ಖೇರ್ ಮೇಲೆ ಬಾಟಲಿ ಎಸೆದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ರಾತ್ರಿ ಒಂದೂವರೆ ಗಂಟೆಗೆ ಕೈಲಾಶ್ ಖೇರ್ ಅವರು ಹಂಪಿ ಗಾಯತ್ರಿ ಪೀಠದ ಪ್ರಧಾನ ವೇದಿಕೆಯಲ್ಲಿ ಸಂಗೀತ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ಈ ವೇಳೆ ಅವರ ಮೇಲೆ ಪ್ರೇಕ್ಷಕರ ಗ್ಯಾಲರಿಯಿಂದ ಯಾರೋ ನೀರು ತುಂಬಿದ ಬಾಟಲಿ ಎಸೆದರು. ಆದರೆ, ಬಾಟಲಿ ಅವರಿಂದ ಸ್ವಲ್ಪ ದೂರದಲ್ಲೇ ಬಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಜನರ ನಡುವಿನಲ್ಲಿ ಘಟನೆಗೆ ಕಾರಣರಾದ ಇಬ್ಬರನ್ನು ಗುರುತಿಸಿ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು. ಅನಂತರ ಕಾರ್ಯಕ್ರಮ ಸುಗಮವಾಗಿ ಜರುಗಿತು. ರಾತ್ರಿ ಎರಡು ಗಂಟೆಯವರೆಗೆ ಕೈಲಾಶ್ ಖೇರ್ ಕಾರ್ಯಕ್ರಮ ನಡೆಸಿಕೊಟ್ಟರು. ಅವರ ಹಾಡಿನ ಮೋಡಿಗೆ ಜನ ಹುಚ್ಚೆದ್ದು ಕುಣಿದರು.

ಬಾಟಲಿ ಎಸೆತಕ್ಕೆ ಕಾರಣವೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು