ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊತ್ತಿ ಉರಿದ ಖಾಸಗಿ ಶಾಲಾ ಬಸ್; 50ಕ್ಕೂ ಹೆಚ್ಚು ಮಕ್ಕಳು ಪಾರು

Last Updated 27 ಮಾರ್ಚ್ 2023, 11:36 IST
ಅಕ್ಷರ ಗಾತ್ರ

ಬಳ್ಳಾರಿ: ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ 50ಕ್ಕೂ ಹೆಚ್ಚು ಮಕ್ಕಳು ಅದೃಷ್ಟವಶಾತ್‌ ಬದುಕುಳಿದಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ಘಟನೆ ನಡೆದಿದ್ದು, ಸಿರುಗುಪ್ಪದಿಂದ ತೆಕ್ಕಲಕೋಟೆಗೆ ತೆರಳುತ್ತಿದ್ದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ಹೊತ್ತಿ ಉರಿದಿದೆ.

ಮೊದಲಿಗೆ ಡಿಸೇಲ್ ಇಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಇದನ್ನು ಗಮನಿಸಿ, ಡ್ರೈವರ್‌ಗೆ ತಿಳಿಸಿದ್ದಾರೆ. ತಕ್ಷಣ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ ಚಾಲಕ ಯಾಸೀನ್, ಎಲ್ಲ ಮಕ್ಕಳನ್ನು ಬಸ್‌ನಿಂದ ಇಳಿಸಿದ್ದಾರೆ.

ಮಕ್ಕಳು ಕೆಳಗೆ ಇಳಿಯುತ್ತಿದ್ದಂತೆ ಬಸ್‌ ಹೊತ್ತಿ ಉರಿದಿದೆ. ವಿದ್ಯಾರ್ಥಿಗಳು, ಚಾಲಕ ಹಾಗೂ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ದುರಂತ ಸ್ವಲ್ಪದರಲ್ಲೇ ತಪ್ಪಿದೆ.

ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿದ್ದಾರೆ. ಸಿರಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT