ಹೊಸಪೇಟೆ (ವಿಜಯನಗರ): ಸರ್ಕಾರದ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳು ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿನ ಗುಣಾತ್ಮಕ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮೀರ್ ಶುಕ್ಲಾ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಹಿಂದೆ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡಿರುವ ಅನುಭವ ಇರುವುದರಿಂದ ವಿಜಯನಗರ ಜಿಲ್ಲೆಯ ಬಗ್ಗೆ ಪೂರ್ಣ ಮಾಹಿತಿ ಇದೆ. ಪ್ರಗತಿ ಪರಿಶೀಲನೆ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ದಾಖಲೆಯಲ್ಲಿರುವ ಅಂಕಿ–ಅಂಶಗಳನ್ನು ವಾಚನ ಮಾಡುವ ಬದಲು ತಮ್ಮ ಇಲಾಖೆಗಳಲ್ಲಿನ ಸಮಸ್ಯೆಗಳನ್ನು ಮುಕ್ತವಾಗಿ ಸಭೆಯಲ್ಲಿ ಚರ್ಚಿಸಿ’ ಎಂದರು.

‘ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬ ಆಗದಂತೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ನಿಗಾ ವಹಿಸುವುದರ ಜೊತೆಗೆ ನೈರ್ಮಲ್ಯ, ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಬೇಕು. ನಿಗದಿತ ವೇಳೆಗೆ ಸಮವಸ್ತ್ರ ವಿತರಣೆ, ವಸತಿ ನಿಲಯದಲ್ಲಿ ಮೂಲ ಸೌಕರ್ಯಗಳ ಕಡೆ ಗಮನ ಹರಿಸಬೇಕು’ ಎಂದು ಸೂಚಿಸಿದರು.

ಕೃಷಿ ಇಲಾಖೆ ಉಪನಿದೇರ್ಶಕ ನಯೀಮ್ ಪಾಷಾ ಮಾತನಾಡಿ, ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 53,843 ಹೆಕ್ಟೇರ್ ನೀರಾವರಿ ಮತ್ತು ಖುಷ್ಕಿ 2,24,218 ಹೆಕ್ಟೇರ್ ಸೇರಿ 2,78,060 ರಷ್ಟು ಬಿತ್ತನೆಯಾಗಿದೆ. ವಿವಿಧ ರಸಗೊಬ್ಬರಗಳ ಸೇರಿ ಒಟ್ಟು 1,11,595 ಮೆಟ್ರಿಕ್ ಟನ್ ಬೇಡಿಕೆ ಇದ್ದು, 69,972 ಮೆಟ್ರಿಕ್ ಟನ್ ವಿತರಣೆ ಮಾಡಲಾಗಿದ್ದು, 17,042 ಮೆಟ್ರಿಕ್ ಟನ್ ದಾಸ್ತಾನು ಲಭ್ಯವಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಶಾ, ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಇದ್ದರು.

‘ತಜ್ಞ ವೈದ್ಯರ ಕೊರತೆ’:

‘ಇಲಾಖೆಯಲ್ಲಿ 66 ತಜ್ಞ ವೈದ್ಯರ ಕೊರತೆ ಇದ್ದು ಅನಸ್ತೇಶಿಯಾ ವೈದ್ಯರ ಅಗತ್ಯವಿದೆ. ಮೆಡಿಕಲ್ ಕಾಲೇಜು ಆರಂಭಕ್ಕೆ ಪ್ರಸ್ತಾವ ಸಲ್ಲಿಸಲಾಗಿದ್ದು ಇಲಾಖೆಯಲ್ಲಿ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕಾತಿಗೆ ಅರ್ಜಿ ಅಹ್ವಾನಿಸಿದರು ಸೇವೆಗೆ ಮುಂದಾಗುತ್ತಿಲ್ಲ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಲ್.ಆರ್.ಶಂಕರನಾಯ್ಕ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.