ಹೊಸಪೇಟೆ: ನಿಶಾನಿ ಕ್ಯಾಂಪ್ ಸೇರಿದಂತೆ ತುಂಗಭದ್ರಾ ಜಲಾಶಯ ನಿರ್ಮಾಣದ ಸಂದರ್ಭದಲ್ಲಿ ಬಂದು ನೆಲೆಸಿದ ಜನವಸತಿ ಪ್ರದೇಶಗಳಲ್ಲಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಸೋಮವಾರ ತುಂಗಭದ್ರಾ ಜಂಟಿ ಹೋರಾಟ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಗರದ ತುಂಗಭದ್ರಾ ಮಂಡಳಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಂತರ ಮಂಡಳಿ ಕಾರ್ಯದರ್ಶಿ ಜಿ. ನಾಗಮೋಹನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಿರ್ಮಾಣ ಕಾರ್ಯ ಸೇರಿದಂತೆ ಇತರೆ ಕೆಲಸಗಳಿಗಾಗಿ ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಇತರೆ ರಾಜ್ಯಗಳಿಂದ ಅನೇಕ ಜನ ಜಲಾಶಯ ನಿರ್ಮಾಣದ ಸಂದರ್ಭದಲ್ಲಿ ಬಂದು ಇಲ್ಲಿಯೇ ನೆಲೆಸಿದ್ದಾರೆ. ಆದರೆ, ಆ ಪ್ರದೇಶದಲ್ಲಿ ಮೂಲಸೌಕರ್ಯ ಕಲ್ಪಿಸದೆ ನಿರ್ಲಕ್ಷಿಸಲಾಗಿದೆ. ಹಲವು ಸಲ ಈ ಸಂಬಂಧ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಗೋಳು ತೋಡಿಕೊಂಡಿದ್ದಾರೆ.

ತುಂಗಭದ್ರಾ ಮಂಡಳಿಯಿಂದ ನಿರ್ಮಿಸಿ ಕೊಟ್ಟಿರುವ ಮನೆಗಳ ದುರಸ್ತಿ ಮಾಡಿಕೊಡಬೇಕು. ಈಗ ಹೆಚ್ಚಿಸಿರುವ ಬಾಡಿಗೆ ಅಧಿಕವಾಗಿದ್ದು, ಅದನ್ನು ಕೈಬಿಡಬೇಕು. ಮಂಡಳಿ ತನ್ನ ಬಳಿ ಉಳಿಸಿಕೊಂಡಿರುವ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸಿ, ಅಲ್ಲಿ ವಾಸವಾಗಿರುವವರಿಗೆ ಕಾನೂನು ಪ್ರಕಾರ ನಿವೇಶನ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಮುಖಂಡ ಡಿ. ವೆಂಕಟರಮಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.