ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ಪಲ್ಸ್‌ ಪೋಲಿಯೊ: ಶೇ 96ರಷ್ಟು ಸಾಧನೆ

Published 5 ಮಾರ್ಚ್ 2024, 5:42 IST
Last Updated 5 ಮಾರ್ಚ್ 2024, 5:42 IST
ಅಕ್ಷರ ಗಾತ್ರ

ಬಳ್ಳಾರಿ: ಜಿಲ್ಲೆಯಲ್ಲಿ ಭಾನುವಾರ ಒಂದೇ ದಿನದಲ್ಲಿ ಶೇ 96ರಷ್ಟು ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಹಾಕಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ್‍ಬಾಬು ತಿಳಿಸಿದ್ದಾರೆ.

ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನ ಮಾರ್ಚ್‌ 3ರಂದು ಆರಂಭವಾಗಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗುತ್ತಿದೆ. ಕಾರ್ಯಕ್ರಮದ ಆರಂಭದ ದಿನ ಬಳ್ಳಾರಿ, ಸಂಡೂರು, ಸಿರುಗುಪ್ಪ, ಕುರುಗೋಡು, ಕಂಪ್ಲಿ ತಾಲ್ಲೂಕುಗಳಲ್ಲಿ 1,97,103 ಮಕ್ಕಳ ಪೈಕಿ 1,89,229 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಉಳಿದ 7,874 ಮಕ್ಕಳಿಗೆ ಮಾರ್ಚ್ 6ರವರೆಗೆ ನಡೆಯುವ ಮನೆ ಮನೆ ಭೇಟಿ ಕಾರ್ಯಕ್ರಮದಲ್ಲಿ ಲಸಿಕೆ ಹಾಕಲಾಗುವುದು ಎಂದು ತಿಳಿಸಿದ್ದಾರೆ.

ಎಲ್ಲಾ ಮಕ್ಕಳಿಗೂ ಲಸಿಕೆ ಹಾಕುವ ದಿಸೆಯಲ್ಲಿ 333 ವಲಸೆ ಹಾಗೂ ಕ್ಲಿಷ್ಟಕರ ಪ್ರದೇಶಗಳನ್ನು ಗುರುತಿಸಲಾಗಿತ್ತು. ಅಂತಹ ಸ್ಥಳಗಳಲ್ಲಿ ಲಸಿಕೆ ಹಾಕಲು 174 ತಂಡಗಳನ್ನು ಸಿದ್ದಗೊಳಿಸಲಾಗಿತ್ತು. 968 ಬೂತ್‍, 887 ಮನೆ ಭೇಟಿ ತಂಡ, ಸಂತೆ, ಮಾರುಕಟ್ಟೆ, ಬಸ್ ನಿಲ್ದಾಣ, ಮತ್ತು ಇತರೆ ಜನ ಹೆಚ್ಚು ಸೇರುವ ಸ್ಥಳಗಳಲ್ಲಿ ಲಸಿಕೆ ಹಾಕಲು 51 ತಂಡ ಮತ್ತು ವಲಸೆ ಪ್ರದೇಶಗಳಾದ ಇಟ್ಟಿಗೆ ಭಟ್ಟಿ, ಕಟ್ಟಡ ಕಾಮಗಾರಿ ಪ್ರದೇಶ, ಕಬ್ಬು ಕಡಿಯುವ ಸ್ಥಳ, ಕುರಿಹಟ್ಟಿ ಮುಂತಾದ ಸ್ಥಳಗಳಲ್ಲಿ ಲಸಿಕೆ ಹಾಕಲು 17 ಸಂಚಾರಿ ತಂಡ ನಿಯೋಜಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

ತಂಡಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ನರ್ಸಿಂಗ್‌ ಕಾಲೇಜು ಹಾಗೂ ಸ್ವಯಂ ಸೇವಕರು ಪೋಲಿಯೊ ವ್ಯಾಕ್ಸಿನೇಟರ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ, 185 ಮೇಲ್ವಿಚಾರಕರು ಹಾಗೂ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ನೋಡಲ್ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ತಾಲ್ಲೂಕುವಾರು ವಿವರ (ತಾಲ್ಲೂಕು; 5 ವರ್ಷದೊಳಗಿನ ಮಕ್ಕಳು; ಲಸಿಕೆ ಪಡೆದ ಮಕ್ಕಳು)

ಬಳ್ಳಾರಿ;92495;88912

ಕಂಪ್ಲಿ;15059;14516

ಕುರುಗೋಡು;17831;17266

ಸಂಡೂರು;35392;33721

ಸಿರುಗುಪ್ಪ;36326;34814

ಜಿಲ್ಲಾಧಿಕಾರಿ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತದ ಸಂಪೂರ್ಣ ಬೆಂಬಲದೊಂದಿಗೆ ಈ ಗುರಿ ಸಾಧಿಸಲಾಗಿದೆ.
ಡಾ. ವೈ.ರಮೇಶ್‍ಬಾಬು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಬಳ್ಳಾರಿ
ವಲಸಿಗ ಕುಟುಂಬದ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಹಾಕುತ್ತಿರುವುದು 
ವಲಸಿಗ ಕುಟುಂಬದ ಮಕ್ಕಳಿಗೆ ಪಲ್ಸ್‌ ಪೋಲಿಯೊ ಲಸಿಕೆ ಹಾಕುತ್ತಿರುವುದು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT