ಕೂಡ್ಲಿಗಿ: ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಮಂಗಳವಾರ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ನಿರ್ದೇಶನದಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲಾಗುತ್ತದೆ. 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ರಾಗಿಯನ್ನು ಪ್ರತಿ ಕ್ವಿಂಟಲ್ಗೆ ₹4,886 ಬೆಂಬಲ ಬೆಲೆ ನೀಡಿ ಖರೀದಿ ಮಾಡಲಾಗುತ್ತದೆ. ಇದರ ಪ್ರಯೋಜನವನ್ನು ರೈತರು ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.

ಎಪಿಎಂಸಿ ಸದಸ್ಯ ಟಿ.ಜಿ. ಮಲ್ಲಿಕಾರ್ಜುನಗೌಡ ಮಾತನಾಡಿ, ನೋಂದಣಿ ಮಾಡಿಕೊಂಡ ರೈತರಿಂದ ರಾಗಿ ಖರೀದಿ ಮಾಡಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯಲ್ಲಿ ಅವ್ಯವಾಹರ ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.

ಎಪಿಎಂಸಿ ಉಪಾಧ್ಯಕ್ಷ ಕೆ. ಮಹಾದೇವಪ್ಪ, ಕಾರ್ಯದರ್ಶಿ ಎಸ್.ಸಿ. ಬಸವರಾಜ, ಸದಸ್ಯ ರಂಗಾ ಶ್ರೀನಿವಾಸ್, ಬಣಕಾರ ಚಿನ್ನಾಪ್ರಪ್ಪ, ಸಾಸಲವಾಡ ಚಂದ್ರಪ್ಪ, ಚನ್ನಬಸಪ್ಪ, ತಿಪ್ಪೇಸ್ವಾಮಿ, ಗೌತಮ್, ರಮ್ಜಾನ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.