ಕೊಟ್ಟೂರು: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಖರೀದಿ ಕೇಂದ್ರವನ್ನು ತೆರೆದಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೊಂದಾಯಿಸಿ ಸರ್ಕಾರದ ಸೌಲಭ್ಯ ಸದುಪಯೋಗ ಮಾಡಿಕೊಳ್ಳಬೇಕು ಎಂದು ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಐ.ಎಂ. ದಾರುಕೇಶ್ ಹೇಳಿದರು.

ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಮಂಗಳವಾರ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿಸುವಂತೆ ಸರ್ಕಾರ ವಹಿಸಿದ್ದು ಖರೀದಿಯ ಮಾನದಂಡಗಳ ಅನ್ವಯ ಎಫ್ಎಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು. ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್ಗಳನ್ನು ನಿಯೋಜಿಸುವಂತೆ ಹಾಗೂ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರಗಳನ್ನು ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.

ಮಾರುಕಟ್ಟೆ ಕಾರ್ಯದರ್ಶಿ ಎ.ಕೆ.ವೀರಣ್ಣ ಮಾತನಾಡಿ, ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರಬೇಕು. ಒಂದು ವೇಳೆ ನೊಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಮಾರಾಟ ಮಾಡಬಹುದಾಗಿದೆ. ಮಾರಾಟ ಮಾಡಿದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ಪ್ರೂಟ್ಸ್ ಐಡಿ ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಬ್ಯಾಂಕ್ ಖಾತೆಯ ವಿವರವನ್ನು ರೈತರು ನೀಡಬೇಕಿದೆ ಎಂದರು.

ಮಾರುಕಟ್ಟೆ ಉಪಾಧ್ಯಕ್ಷ ಎಂ.ಶಿವಣ್ಣ, ನಿರ್ದೇಶಕರಾದ ಚಿರಿಬಿ ಕೊಟ್ರೇಶ್, ಶಿವಲಿಂಗಪ್ಪ ಮುಖಂಡರಾದ ನೂರ್ಯ ನಾಯ್ಕ, ವಿ.ಎಸ್.ಎಸ್.ಎನ್ ಅಧ್ಯಕ್ಷ ಹರಾಳು ಸತೀಶ್, ವರ್ತಕರ ಸಂಘದ ಪದಾದಿಕಾರಿಗಳಾದ ಬಿ.ಎಸ್.ವೀರೇಶ್, ಚಾಪಿ ಚಂದ್ರಪ್ಪ, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.