ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ–ಹುಬ್ಬಳ್ಳಿಗೆ ರಾಜಹಂಸ

Published 26 ಜೂನ್ 2024, 16:15 IST
Last Updated 26 ಜೂನ್ 2024, 16:15 IST
ಅಕ್ಷರ ಗಾತ್ರ

ಬಳ್ಳಾರಿ: ಬಳ್ಳಾರಿಯಿಂದ ಹುಬ್ಬಳ್ಳಿ ನಡುವೆ ಜೂನ್ 27ರಿಂದ ಎರಡು ರಾಜಹಂಸ ಬಸ್ ಸಂಚರಿಸಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ತಿಳಿಸಿದ್ದಾರೆ.

ಬಳ್ಳಾರಿ-ಹುಬ್ಬಳ್ಳಿ ಮಾರ್ಗದಲ್ಲಿ ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ ಮಾರ್ಗದಲ್ಲಿ ಸೀಮಿತ ನಿಲುಗಡೆ ಕಲ್ಪಿಸಲಾಗಿದೆ.

ಬಸ್ ಸಂಚರಿಸುವ ವೇಳೆ: ಬಳ್ಳಾರಿಯಿಂದ ಬೆಳಿಗ್ಗೆ 5.30 ಮತ್ತು 7 ಗಂಟೆಗೆ ಹೊರಟು, ಹುಬ್ಬಳ್ಳಿಗೆ ಬೆಳಿಗ್ಗೆ 10.30 ಮತ್ತು ಮಧ್ಯಾಹ್ನ 12 ಗಂಟೆಗೆ ಬಸ್‌ಗಳು ತಲುಪಲಿವೆ.

ಹುಬ್ಬಳ್ಳಿಯಿಂದ ಬೆಳಿಗ್ಗೆ 11 ಮತ್ತು ಮಧ್ಯಾಹ್ನ 1 ಗಂಟೆಗೆ ಹೊರಟು, ಬಳ್ಳಾರಿಗೆ ಸಂಜೆ 4 ಮತ್ತು 6 ಗಂಟೆಗೆ ತಲುಪಲಿವೆ.

ಟಿಕೆಟ್ ದರ ₹430 ಇರಲಿದೆ. ಮುಂಗಡ ಆಸನಗಳನ್ನು ಕಾಯ್ದಿರಿಸಲು www.ksrtc.in ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT